ಕೇಂದ್ರ ಸರ್ಕಾರದಿಂದ ಹಿಂದಿ ಹೇರಿಕೆ ಹಾಗೂ ಮಲತಾಯಿ ಧೋರಣೆ ಖಂಡಿಸಿ ದೊಡ್ಡಬಳ್ಳಾಪುರದ ಅಂಚೆ ಕಚೇರಿ ಮುಂಭಾಗ ಕನ್ನಡ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿಯ ತಾಲೂಕು ಅಧ್ಯಕ್ಷ ರಮೇಶ್, ಕನ್ನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎ.ನಂಜಪ್ಪ ಕನ್ನಡ ಪಕ್ಷ ಮುಖಂಡರಾದ ಉಮಾಶಂಕರ್, ಹನುಮಣ್ಣ, ವೆಂಕಟೇಶ್, ರಂಗನಾಥ್, ಮೋಹನ, ಬೋರೇಗೌಡ, ಕುಮಾರ್, ರಾಧಾಮಣಿ ಇದ್ದರು. 
ಜಿಲ್ಲೆ

ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ

ಕೇಂದ್ರ ಸರ್ಕಾರದಿಂದ ಹಿಂದಿ ಹೇರಿಕೆ ಹಾಗೂ ಮಲತಾಯಿ ಧೋರಣೆ ಖಂಡಿಸಿ ದೊಡ್ಡಬಳ್ಳಾಪುರದ ಅಂಚೆ ಕಚೇರಿ ಮುಂಭಾಗ ಕನ್ನಡ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿಯ ತಾಲೂಕು ಅಧ್ಯಕ್ಷ ರಮೇಶ್, ಕನ್ನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎ.ನಂಜಪ್ಪ ಕನ್ನಡ ಪಕ್ಷ ಮುಖಂಡರಾದ ಉಮಾಶಂಕರ್, ಹನುಮಣ್ಣ, ವೆಂಕಟೇಶ್, ರಂಗನಾಥ್, ಮೋಹನ, ಬೋರೇಗೌಡ, ಕುಮಾರ್, ರಾಧಾಮಣಿ ಇದ್ದರು.

ಬೆಂಗಳೂರು ಗ್ರಾಮಾಂತರ ಡೆಸ್ಕ್


ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಕನ್ನಡ ಕಡೆಗಣಿಸಿ ಹಿಂದಿ ಭಾಷೆ ಹೇರುತ್ತಿರುವ ಮತ್ತು ನೆನೆಗುದಿಗೆ ಬಿದ್ದಿರುವ ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಧೋರಣೆ ಹಾಗೂ ರಾಜ್ಯದ ತೆರಿಗೆಯಲ್ಲಿ ಕರ್ನಾಟಕಕ್ಕೆ ಬರಬೇಕಾದ ವಿವಿಧ ಹಣಕಾಸು ಯೋಜನೆಗಳಲ್ಲಿ ವಂಚನೆ ಮಾಡುತ್ತಿರುವ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಗುರುವಾರ ಕನ್ನಡ ಪಕ್ಷದ ವತಿಯಿಂದ ನಗರದ ಮುಖ್ಯ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಕನ್ನಡ ಪಕ್ಷದ ಕೇಂದ್ರ ಸಮಿತಿ ಉಪಾಧ್ಯಕ್ಷ ಸಂಜೀವ್ ನಾಯಕ್ ಮಾತನಾಡಿ, ಇತ್ತೀಚೆಗೆ ಕೇಂದ್ರ ಸ್ವಾಮ್ಯದ ಕಚೇರಿಗಳಲ್ಲಿ ಹಿಂದಿ ಭಾಷೆಯಲ್ಲಿ ವ್ಯವಹರಿಸುತ್ತಿರುವುದು ಹೆಚ್ಚಾಗುತ್ತಿದ್ದು, ಕನ್ನಡ ಬಲ್ಲ ಇಲ್ಲಿನ ಜನರು ತೊಂದರೆ ಅನುಭವಿಸುವಂತಾಗಿದೆ. ಸಂವಿಧಾನದತ್ತವಾಗಿ ಹಿಂದಿ ಭಾಷೆಗೆ ಪ್ರತ್ಯೇಕ ಮನ್ನಣೆ ಇಲ್ಲದಿದ್ದರೂ, ಅನಗತ್ಯವಾಗಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದರು. ಕನ್ನಡ ಭಾಷೆಯನ್ನು ಕಡೆಗಣಿಸಿ ಉತ್ತರ ಭಾರತದಿಂದ ಬಂದ ವಲಸಿಗರ ಸಂತೃಪ್ತಿಪಡಿಸಲು ಹಿಂದಿ ಭಾಷೆಯನ್ನು ಹೇರುತ್ತಿರುವ ಕ್ರಮ ಖಂಡನೀಯವಾಗಿದೆ. ಇನ್ನು ರಾಜ್ಯದಲ್ಲಿ ಹಲವಾರು ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಮಹದಾಯಿಗೆ ಗೋವಾ ಅಡ್ಡಗಾಲಾಕಿದರೆ, ಕಾವೇರಿ ನೀರಿಗಾಗಿ ಕಟ್ಟುವ ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿವೆ. ಕೃಷ್ಣ ನದಿ ನೀರಿನ ಹಂಚಿಕೆಯಲ್ಲಿಯೂ ತಾರತಮ್ಯ ಮಾಡಲಾಗುತ್ತಿದೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಪ್ರತಿ ವಿಚಾರದಲ್ಲಿಯೂ ಅನ್ಯಾಯವಾಗುತ್ತಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹ ಮಾಡುವ ಎರಡನೇ ರಾಜ್ಯ ಕರ್ನಾಟಕವಾಗಿದೆ. ಆದರೆ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ಉತ್ತರ ಭಾರತ ರಾಜ್ಯಗಳ ಪಾಲಾಗುತ್ತಿದೆ. ವಿವಿಧ ಹಣಕಾಸು ಯೋಜನೆಗಳಲ್ಲಿಯೂ ಸಹ ರಾಜ್ಯಕ್ಕೆ ಅನುದಾನದಲ್ಲಿ ತಾರತಮ್ಯವಾಗಿ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇಷ್ಟಾದರೂ ರಾಜ್ಯದಲ್ಲಿ ಕುರ್ಚಿ ಕಾದಾಟದಲ್ಲಿ ಸರ್ಕಾರ ಮೈಮರೆತು ಕೂತಿದೆ. ರಾಜ್ಯ ಜನ ಹಿತ ಕಾಪಾಡುವಲ್ಲಿ ಸರ್ಕಾರಗಳು ವಿಫಲವಾಗುತ್ತಿವೆ ಎಂದು ದೂರಿದರು.

ಕರ್ನಾಟಕದಲ್ಲಿ ಕನ್ನಡ ಭಾಷೆಯ ಮೇಲೆ ಹಿಂದಿ ಹೇರುತ್ತಿರುವುದನ್ನು ನಿಲ್ಲಿಸಬೇಕು. ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳು ಯಥಾವತ್ತಾಗಿ ಜಾರಿಯಾಗಬೇಕು. ಕರ್ನಾಟಕಕ್ಕೆ ಬರಬೇಕಾಗಿರುವ ವಿವಿಧ ಹಣಕಾಸಿನ ಯೋಜನೆಯನ್ನು ವಂಚನೆ ಮಾಡುತ್ತಿರುವುದನ್ನು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿರುವುದನ್ನ ಈ ಕೂಡಲೆ ನಿಲ್ಲಿಸಬೇಕು.
- ಮುನಿಪಾಪಯ್ಯ ಜಿಲ್ಲಾಧ್ಯಕ್ಷ