ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾಮದಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ತಿತೀರ ಧರ್ಮಜ ಉತ್ತಪ್ಪ, ಕಾಳಿಮಾಡ ಪ್ರಶಾಂತ್, ಅಣ್ಣಳಮಾಡ ಲಾಲಾ ಅಪ್ಪಣ್ಣ, ಕುಪ್ಪಣ್ಣಮಾಡ ಪ್ರೀತಮ್, ಜಮ್ಮಡ ಸೋಮಣ್ಣ, ಬುಟಿಯಂಡ ತಂಬಿ, ಬೊಳೇರ ಅಪುಟ್ಟ ಇತರರು ಇದ್ದರು. 
ಜಿಲ್ಲೆ

ವಿರಾಜಪೇಟೆ ಕ್ಷೇತ್ರದಲ್ಲಿ ತಡೆರಹಿತ ವಿದ್ಯುತ್ ಪೂರೈಕೆಗೆ ಕ್ರಮ

ಗೋಣಿಕೊಪ್ಪಲು: ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾಮದಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

90 ಲಕ್ಷ ರೂ.ವೆಚ್ಚದಲ್ಲಿ ನೂತನ 11ಕೆವಿ ಎಚ್‌ಟಿ ವಿದ್ಯುತ್ ಮಾರ್ಗ ಕಾಮಗಾರಿಗೆ ಚಾಲನೆ ನೀಡಿದ ಪೊನ್ನಣ್ಣ ಮಾತನಾಡಿ, ಕ್ಷೇತ್ರಾದ್ಯಂತ ಉತ್ತಮ ವಿದ್ಯುತ್ ಪೂರೈಸಿ ಕೃಷಿಕರಿಗೆ ಹಾಗೂ ಗ್ರಾಹಕರಿಗೆ ನಿರಂತರವಾಗಿ ತಡೆರಹಿತ ವಿದ್ಯುತ್ ನೀಡಲು ಸರ್ಕಾರದ ವತಿಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಉತ್ತಮ ಗುಣಮಟ್ಟದ ನೂತನ ವಿದ್ಯುತ್ ಮಾರ್ಗಗಳನ್ನು ಅಳವಡಿಸುವುದರೊಂದಿಗೆ, ನೂತನ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗುತ್ತದೆ. ಸಬ್‌ಸ್ಟೇಷನ್‌ಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕರು, ಆದ್ಯತೆ ಮೇರೆಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್‌ಹುಕುಂ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ವಲಯ ಅಧ್ಯಕ್ಷ ಕುಪ್ಪಣ್ಣಮಾಡ ಪ್ರೀತಮ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಸ್ಥಳೀಯ ಪ್ರಮುಖರಾದ ಬುಟಿಯಂಡ ತಂಬಿ, ಬೊಳೇರ ಅಪುಟ್ಟ ಇತರರು ಇದ್ದರು.