ವಿಜಯವಾಣಿ ಸುದ್ದಿಜಾಲ ಧಾರವಾಡ
ಸರ್ಕಾರಿ ಶಾಲೆಗಳ ಶಿಕ್ಷಕರ ಪಠ್ಯೇತರ ಚಟುವಟಿಕೆಗಳ ಹೊರೆ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮೊಟ್ಟೆ, ಬಾಳೆಹಣ್ಣು ವಿತರಣೆಯಲ್ಲಿ ಆಗುತ್ತಿರುವ ತೊಂದರೆಗಳನ್ನು ಪರಿಹರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಆನ್‌ಲೈನ್ ಹಾಗೂ ತಾಂತ್ರಿಕ ಕಾರ್ಯಗಳಿಗಾಗಿ ಶಿಕ್ಷಕರ ನೆರವಿಗೆ ತಾತ್ಕಾಲಿಕ ತಾಂತ್ರಿಕ ಸಿಬ್ಬಂದಿ ನಿಯೋಜಿಸಲು ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮಿಷನ್ ವಿದ್ಯಾಕಾಶಿ ಅಡಿ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರೋಪಾಯ ಕುರಿತ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಶಿಕ್ಷಕರಿಗೆ ಆಡಳಿತಾತ್ಮಕ ಹಾಗೂ ಪೌಷ್ಠಿಕ ಆಹಾರ ವಿತರಣೆ ಕಾರ್ಯಗಳಿಂದ ತೊಂದರೆ ಆಗುತ್ತಿದೆ ಎಂಬ ದೂರು ಇದೆ. ಬಿಸಿಯೂಟ ನೀಡುವ ಏಜೆನ್ಸಿ ಮೂಲಕವೇ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲು ಅಥವಾ ಬೇರೆ ಏಜೆನ್ಸಿ ನೇಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಉಪ ನಿರ್ದೇಶಕರಿಗೆ ಸೂಚಿಸಿದರು.
ಅತಿಥಿ ಶಿಕ್ಷಕರ ಅವಶ್ಯಕತೆ ಇದ್ದಲ್ಲಿ ನೇಮಿಸಬೇಕು. ತಮಗಿಷ್ಟ ಬಂದ0ತೆ ಶಿಕ್ಷಕರ ವರ್ಗಾವಣೆ, ನಿಯೋಜನೆ ಮಾಡಿದರೆ ಸಂಬ0ಧಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಮಾತನಾಡಿ, ಶಿಕ್ಷಕರಿಗೆ ಪಠ್ಯಕ್ರಮ, ಬೋಧನೆ ಮೊದಲ ಆದ್ಯತೆ ಆಗಬೇಕು. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶೈಕ್ಷಣಿಕ ಗುಣಮಟ್ಟ ಗಮನಿಸಿದರೆ ಶಿಕ್ಷಕರ ತೊಡಗಿಸಿಕೊಳ್ಳುವಿಕೆ ಕಡಿಮೆ ಇರುವುದು ಗೊತ್ತಾಗುತ್ತದೆ ಎಂದರು.
ಡಿಡಿಪಿಐ ಎಸ್.ಎಸ್. ಕೆಳದಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಿಷನ್ ವಿದ್ಯಾಕಾಶಿಯ ಸಂಯೋಜಕ, ವಾರ್ತಾ ಸಹಾಯಕ ಅಽಕಾರಿ ಡಾ. ಸುರೇಶ ಹಿರೇಮಠ ಸ್ವಾಗತಿಸಿದರು.
ಪ್ರೊಬೆಷನರಿ ಐಎಎಸ್ ಅಽಕಾರಿ ರಿತಿಕಾ ವರ್ಮಾ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ವಕ್ ಇಲಾಖೆ ಅಽಕಾರಿಗಳು, ಕ್ಷೇತ್ರ ಶಿಕ್ಷಣಾಽಕಾರಿಗಳು, ಮುಖ್ಯಾಧ್ಯಾಪಕರು ಉಪಸ್ಥಿತರಿದ್ದರು.