ಜಿಲ್ಲೆ

ನೀರಿನ ಟ್ಯಾಂಕರ್ ವಾಹನಕ್ಕೆ ಸ್ಟಿಕ್ಕರ್ ಕಡ್ಡಾಯ: ಬಿಬಿಎಂಪಿ ಸೂಚನೆ

ಬೆಂಗಳೂರು: ನಗರದಲ್ಲಿ ಸ್ವಯಂ ನೋಂದಣಿ ಮಾಡಿಕೊಡಿರುವ ಖಾಸಗಿ ನೀರು ಸರಬರಾಜು ಟ್ಯಾಂಕರ್ ವಾಹನಗಳ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಬಳಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು ಆಯಾ ವಲಯವಾರು ನಿಯೋಜಿಸಲಾಗಿದೆ. ಇಂತಹ ವಾಹನಗಳ ಮೇಲೆ ಸರ್ಕಾರ ನಿಗದಿ ಮಾಡಿರುವ ಪ್ರತಿ ಟ್ಯಾಂಕರ್ ನೀರಿನ ದರ, ದೂರವಾಣಿ ಸಂಖ್ಯೆಯನ್ನು ಒಳಗೊಂಡ ಸ್ಟಿಕ್ಕರ್‌ಅನ್ನು ಜಲಮಂಡಳಿ ಅನುಮೋದಿಸಿದದು, ಅದನ್ನು ಆಯಾ ವಲಯಗಳಲ್ಲೇ ಪಡೆದು ವಾಹನದ ಮೇಲೆ ಪ್ರದರ್ಶಿಸಬೇಕು. ಜತೆಗೆ ನೋಂದಣಿ ಪ್ರಮಾಣ ಪತ್ರ, ವಾಹನದ ಸಂಖ್ಯೆ, ಮಾಲೀಕರ ಹೆಸರು ನಮೂದಿಸಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮ ಜರುಸಲಾಗುವುದು ಎಂದು ಪಾಲಿಕೆ ಎಚ್ಚರಿಕೆ ನೀಡಿದೆ.

ಟ್ಯಾಂಕರ್ ಮಾಲೀಕರಿಗೆ ನಿಗದಿಪಡಿಸಿರುವ ದರದ ಅನುಸಾರ ನೀರು ಪೂರೈಕೆ ಮಾಡಲು ಸೂಚಿಸಲಾಗಿರುತ್ತದೆ. ನೋಂದಣಿಯಾಗದ ಟ್ಯಾಂಕರ್‌ಗಳಿಗೆ ನೀರು ಪೂರೈಕೆ ಮಾಡಲು ಅವಕಾಶ ನೀಡುವುದಿಲ್ಲ. ಸರ್ಕಾರದಿಂದ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿಗೆ ಮಾರಾಟ ಮಾಡಿದಲ್ಲಿ ಅಥವಾ ನೀರಿನ ಗುಣಮಟ್ಟದ ಸಮಸ್ಯೆ ಉಂಟಾದಲ್ಲಿ ಜಲಮಂಡಳಿಯ ಸಹಾಯವಾಣಿ ಸಂಖ್ಯೆ 1916 ಗೆ ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 1533 ಗೆ ಸಂಪರ್ಕಿಸಬಹುದಾಗಿದೆ ಎಂದು ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.