ಹಾವೇರಿ: ಹೊಟ್ಟೆನೋವು ತಾಳಲಾರದೆ ವೃದ್ಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ.
ಶಿವಪ್ಪ ಬಸಪ್ಪ ದೊಡ್ಡಮನಿ (63) ಮೃತ ವೃದ್ಧ.
ಇವರು ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.