ಜಿಲ್ಲೆ

ಕಾನೂನುಬಾಹಿರ ಚಟುವಟಿಕೆಗೆ ಬಂದ್ ಮಾಡಿಸಿ

ಬಸವರಾಜ ವೀರಪ್ಪ ಗರಗ

ಮುಂಡಗೋಡ: ಕಾನೂನು ಬಾಹಿರ ಚಟುವಟಿಕೆಗಳು ಏನೇ ಇದ್ದರೂ ಅವುಗಳನ್ನು ಬಂದ್ ಮಾಡಿಸಬೇಕು ಎಂದು ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳೀಯ ಪೊಲೀಸ್ ಠಾಣೆಗೆ ಮಂಗಳವಾರ ಪ್ರಥಮ ಬಾರಿ ಭೇಟಿ ನೀಡಿದ ಅವರು ತಾಲೂಕಿನಲ್ಲಿನ ಅಪರಾಧ ಪ್ರಕರಣಗಳ ಮಾಹಿತಿ ಹಾಗೂ ತಾಲೂಕಿನ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾನು ಹೊಸದಾಗಿ ಶಿರಸಿ ವಿಭಾಗಕ್ಕೆ ಬಂದಿದ್ದು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಏನೇನು ಕ್ರಮ ಕೈಗೊಳ್ಳಬಹುದು. ಪಟ್ಟಣ ವ್ಯಾಪ್ತಿಯಲ್ಲಿ ಸಂಚಾರ ಸಿಕ್ಕು ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು. ತಾಲೂಕಿನ ಜನಸಂಖ್ಯೆ ಅನುಗುಣವಾಗಿ ಸಿಬ್ಬಂದಿ ಕೊರತೆ ಇರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದರು.

ಮುಂಡಗೋಡ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಇನ್​ಸ್ಪೆಕ್ಟರ್ ಹಾಗೂ ಪಿಎಸ್​ಐಗಳು ಹಾಗೂ ಸಿಬ್ಬಂದಿ ಇದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುತ್ತ ಉತ್ತಮವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಸಿಪಿಐ ರಂಗನಾಥ ನೀಲಮ್ಮನವರ ಹಾಗೂ ಪಿಎಸ್​ಐ ವಿನೋದ ಇದ್ದರು.