ಜಿಲ್ಲೆ

ಶಾಸಕ ಯತ್ನಾಳಗೆ ತಮಟಗಾರ ತಿರುಗೇಟು; ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಬಿತ್ತುವ ಕೆಲಸ ಬಿಡಿ

ಮಂಜುನಾಥ ಅಂಗಡಿ

ಧಾರವಾಡ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿರುವ ಅವರು, ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಅಂಜುಮನ್ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಅಽವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆ ಆಗಬೇಕು. ಆದರೆ, ಶಾಸಕ ಯತ್ನಾಳ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಕಾಲಹರಣ ಮಾಡಿದ್ದಾರೆ. ಇದು ಖಂಡನೀಯ ಎಂದರು.
ಇತ್ತೀಚೆಗೆ ನಡೆದ ಮುಸ್ಲಿಂ ಧರ್ಮ ಗುರುಗಳ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಗ್ರ ಸಂಘಟನೆಯೊAದಿಗೆ ಸಹಾನುಭೂತಿಯುಳ್ಳ ಮೌಲ್ವಿ ತನ್ವೀರ್ ಪೀರಾ ಅವರೊಂದಿಗೆ ವೇದಿಕೆ ಹಂಚಿಕೊAಡಿದ್ದಾರೆ ಎಂದು ಶಾಸಕ ಯತ್ನಾಳ ಆರೋಪಿಸಿದ್ದಾರೆ. ಹಾಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅದೇ ತನ್ವೀರ್ ಪೀರಾ ಅವರೊಂದಿಗೆ ಇರುವ ಫೋಟೊ ಬಿಡುಗಡೆ ಮಾಡಿದ ತಮಟಗಾರ, ಈ ಬಗ್ಗೆಯೂ ಯತ್ನಾಳ ತನಿಖೆ ಮಾಡಿಸಲಿ ಎಂದರು.

  • ಮಾನಸಿಕ ಆಸ್ಪತ್ರೆಗೆ ಬರಲಿ:
    ಯತ್ನಾಳ ಅವರು ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ಪ್ರತಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಅವರನ್ನು ಪರಿಗಣಿಸಿಲ್ಲ. ಈ ಹತಾಶೆಯಿಂದ ಸಮಾಜದ ಸ್ವಾಸ್ಥ್ಯ ಕೆಡಿಸಲು ಯತ್ನಿಸುತ್ತಿದ್ದಾರೆ. ಯತ್ನಾಳ ಅವರಿಗೆ ಬಿಜೆಪಿಯಲ್ಲಿ ರಾಜಕೀಯ ಭವಿಷ್ಯ ಇಲ್ಲದಾಗಿದೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಸದ್ಯ ಬೆಳಗಾವಿಯಲ್ಲಿರುವ ಯತ್ನಾಳ, ಹತ್ತಿರದ ಧಾರವಾಡ ಮಾನಸಿಕ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು ಎಂದರು.