ಮಾನ್ವಿಯಲ್ಲಿ ಪುರಸಭೆ ಮುಖ್ಯಾಧಿಕಾರಿ ಪರಶುರಾಮ್ ದೇವಮಾನೆಗೆ ಡಾ.ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘ ಮನವಿ ಸಲ್ಲಿಸಿತು. ಸಂಘದ ತಾಲೂಕು ಅಧ್ಯಕ್ಷ ರೇಣುಕರಾಜ್, ಪ್ರಮುಖರಾದ ಸಾಜಿದ್ ಪಾಷಾ, ರಂಗನಾಥ, ಹನುಮಂತ, ಬಸವ ಇತರರಿದ್ದರು. 
ಜಿಲ್ಲೆ

ಬೀದಿ ನಾಯಿಗಳ ಕಾಟ ತಡೆಯಿರಿ

ಮಾನ್ವಿ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ಆಗ್ರಹಿಸಿ ಡಾ.ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಘಟಕ ಗುರುವಾರ ಪುರಸಭೆ ಮುಖ್ಯಾಧಿಕಾರಿ ಪರಶುರಾಮ್ ದೇವಮಾನೆಗೆ ಮನವಿ ಸಲ್ಲಿಸಿತು.

ಸಂಘದ ತಾಲೂಕು ಅಧ್ಯಕ್ಷ ರೇಣುಕರಾಜ್ ಮಾತನಾಡಿ, ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು ಜನರು ಓಡಾಡಲು ಭಯಪಡುವಂತಾಗಿದೆ. ಪಟ್ಟಣದ ಕೆಲ ವಾರ್ಡ್‌ಗಳಲ್ಲಿ ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆಗಳು ನಡೆದಿವೆ.

ವೃದ್ಧರು, ಮಕ್ಕಳು, ಮಹಿಳೆಯರು ರಸ್ತೆಗಳಲ್ಲಿ ತಿರುಗಾಡುವುದೇ ಕಷ್ಟವಾಗಿದೆ. ಆದ್ದರಿಂದ ಕೂಡಲೇ ಬೀದಿ ನಾಯಿಗಳನ್ನು ಹಿಡಿದು ಬೇರೆಡೆ ಸಾಗಿಸಬೇಕು ಆಗ್ರಹಿಸಿದರು. ಪ್ರಮುಖರಾದ ಕೆ.ಸಾಜೀದ್ ಪಾಷಾ, ವೀರೇಶ, ವೀರೇಶ ನಾಯಕ, ದುರ್ಗಪ್ಪ, ರಂಗನಾಥ, ಹನುಮಂತ, ಬಸವ, ವಿಶ್ವನಾಥ, ವೆಂಕಟೇಶ, ಗಣೇಶ, ಕೊಂಡಯ್ಯ ಇತರರಿದ್ದರು.