ಜಿಲ್ಲೆ

ಅರಬ್ಬಿಯಲ್ಲಿ ಬಿರುಗಾಳಿ: ಬೋಟ್‌ ಮುಳುಗಡೆ

Uttara Kannada - Subash Hegde

ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಉಂಟಾದ ಭಾರಿ ಗಾಳಿ ಮಳೆಯಿಂದಾಗಿ ಮೀನುಗಾರಿಕೆ ಬೋಟ್ ಒಂದು ಮುಳುಗಡೆಯಾಗಿದ್ದು, ಅದರಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಮಹಾದೇವ ಖಾರ್ವಿ ಎಂಬುವರ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿದೆ.

ಶನಿವಾರ ಬೆಳಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಶನಿವಾರ ನಸುಕಿನ ಜಾವದಿಂದ ಉತ್ತರಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಗಾಳಿ ಮಳೆ ಪ್ರಾರಂಭಗೊAಡಿದ್ದು, ಸಮುದ್ರಕ್ಕೆ ತೆರಳುವವರಿಗೆ ಜಿಲ್ಲಾಡಳಿತ ಈ ಕುರಿತು ಅಲರ್ಟ್ ನೀಡಿದೆ.