ತೂಮಿನಾಡಿನ ರಸ್ತೆ ಬದಿಯಲ್ಲಿ ಕಂಡು ಬಂದ ನಾಯಿಗಳ ಹಿಂಡು.  
ಜಿಲ್ಲೆ

ಮಂಜೇಶ್ವರದಲ್ಲಿ ಬೀದಿನಾಯಿಗಳ ಉಪಟಳ

ಸೌಮ್ಯ ಆರ್

ಮಂಜೇಶ್ವರ: ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಳವಾಗಿದ್ದು, ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ತೆರಳುವವರಿಗೆ ತೀವ್ರ ತೊಂದರೆ ಎದುರಾಗಿದ್ದು, ನಾಯಿಗಳ ಉಪಟಳದಿಂದಾಗಿ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ವಿದ್ಯಾರ್ಥಿಗಳು, ನಿತ್ಯ ಸಂಚರಿಸುವವರು ಬೀದಿನಾಯಿಗಳ ಹಾವಳಿಯಿಂದಾಗಿ ಹೊರಗೆ ತೆರಳಲು ಭಯಪಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಿಕರು ಈ ಕುರಿತು ಅಸಮಾಧಾನಗೊಂಡಿದ್ದು, ಆಡಳಿತ ಯಂತ್ರ ಈ ಕುರಿತು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಕಿಡಿಕಾರಿದ್ದಾರೆ.