ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಗತಿ ಕಾರ್ಯಕ್ರಮಕ್ಕೆ ಎಡಿಸಿ ಮೊಹಮ್ಮದ್ ಜುಬೇರ್ ಚಾಲನೆ ನೀಡಿದರು. ಪ್ರಭಾರ ಕುಲಪತಿ ಪ್ರೊ.ಸಾಹೇಬ್ ಅಲಿ ನಿರಗುಡಿ, ಕುಲಸಚಿವ ಪ್ರೊ.ಎಸ್.ಸಿ.ಪಾಟೀಲ್, ಡಾ.ಅನಂತ ಝಂಡೇಕರ್ ಇದ್ದರು. 
ಜಿಲ್ಲೆ

ಸ್ಪರ್ಧಾತ್ಮಕ ಮನೋಭಾವನೆ ಬಲಪಡಿಸಿಕೊಳ್ಳಿ

Gangavati - Desk - Veeresh S Ullagaddi

ಬಳ್ಳಾರಿ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಪಡೆಯಲು ಪೂರ್ವಸಿದ್ಧತೆ ಅತಿ ಮುಖ್ಯವಾಗಿದೆ ಎಂದು ಎಡಿಸಿ ಮೊಹಮ್ಮದ್ ಜುಬೇರ್ ಹೇಳಿದರು.


ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಜಂಟಿ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಗತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.


ವಿದ್ಯಾರ್ಥಿಗಳು ಸ್ಪರ್ಧಾಮನೋಭಾವ ಬೆಳೆಸಿಕೊಳ್ಳಬೇಕು. ಹುಟ್ಟಿನಿಂದ ಯಾರು ಜ್ಞಾನಿಯಾಗಿರುವುದಿಲ್ಲ. ಸತತ ಪ್ರಯತ್ನದ ಮೂಲಕ ಯಶಸ್ಸು ಸಾಧಿಸಬಹುದಾಗಿದೆ.

ಮೊಬೈಲ್ ಬಳಕೆ ಕಡಿಮೆ ಮಾಡಿ, ಪುಸ್ತಕಗಳನ್ನು ಹೆಚ್ಚಾಗಿ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ವಿವಿ ಪ್ರಭಾರ ಕುಲಪತಿ ಪ್ರೊ.ಸಾಹೇಬ್ ಅಲಿ ನಿರಗುಡಿ ಮಾತನಾಡಿ, ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಮಾತ್ರ ಉನ್ನತ ಹುದ್ದೆ ಪಡೆಯಲು ಸಾಧ್ಯವಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.


ವಿವಿಯ ಕುಲಸಚಿವ ಪ್ರೊ.ಎಸ್.ಸಿ.ಪಾಟೀಲ್, ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥ ಡಾ.ಅನಂತ ಝಂಡೇಕರ್, ಮಹ್ಮದ ಸಾಧಿಕ್, ಸಂತೋಷ್‌ಕುಮಾರ್, ನಾಗರಾಜ್. ಎಚ್, ಓಂಕಾರಸ್ವಾಮಿ,

ಡಾ.ತಿಪ್ಪೇಸ್ವಾಮಿ ಹಾಗೂ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.