ಕೂಡ್ಲಿಗಿ ನ್ಯಾಯಾಲಯ ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಜಾಥಾಕ್ಕೆ ನ್ಯಾಯಾಧೀಶೆ ಸಿ.ಮಹಾಲಕ್ಷ್ಮೀ ಚಾಲನೆ ನೀಡಿದರು. ಸಹಾಯಕ ಸರ್ಕಾರಿ ಅಭಿಯೋಜಕಿ ವೈ.ಶಿಲ್ಪಾ, ತಹಸೀಲ್ದಾರ್ ಎಂ.ರೇಣುಕಾ, ತಾಪಂ ಇಒ ಕೆ.ನರಸಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಶಿರಸ್ತೆದಾರ ಮಹಮ್ಮದ್ ಗೌಸ್, ಬಿಇಒ ಪದ್ಮನಾಭ ಕರಣಂ, ವಕೀಲ ಸಿ.ವಿರೂಪಾಕ್ಷಪ್ಪ, ಉಪ ನೋಂದಣಿ ಅಧಿಕಾರಿ ವೈಶಾಲಿ, ಸಪಪೂ ಕಾಲೇಜು ಪ್ರಾಚಾರ್ಯೆ ಟಿ.ಕೊತ್ಲಮ್ಮ ಇತರರಿದ್ದರು. 
ಜಿಲ್ಲೆ

ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಿ

ಗಾಯತ್ರಿ ಮಾಲಿಪಾಟೀಲ್

ಕೂಡ್ಲಿಗಿ: ಭಾರತದ ಪ್ರಜಾಪ್ರಭುತ್ವದ ಘನತೆ ಎತ್ತಿ ಹಿಡಿಯುವಲ್ಲಿ ಮತದಾರರ ಪಾತ್ರ ಮುಖ್ಯವಾಗಿದೆ ಎಂದು ನ್ಯಾಯಾಧೀಶೆ ಸಿ.ಮಹಾಲಕ್ಷ್ಮೀ ಹೇಳಿದರು.

ಪಟ್ಟಣದ ತಾಲೂಕು ಆಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿವರ್ಷ ಭಾರತದಲ್ಲಿ ಲಕ್ಷಾಂತರ ಜನರು ಮತದಾನದ ಹಕ್ಕನ್ನು ಪಡೆಯುತ್ತಾರೆ. ಅವರಿಗೆ ಮತದಾನದ ಪ್ರಾಮುಖ್ಯತೆ ಬಗ್ಗೆ ತಿಳಿಸುವ ಅಗತ್ಯವಿದೆ. ಎಲ್ಲರೂ ಮತದಾನ

ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು. ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಜಾಗೃತಗೊಳಿಸಬೇಕು. 18 ವರ್ಷದ ಯುವಕರು ಕಡ್ಡಾಯವಾಗಿ ನೋಂದಾಯಿಸಿ ಸಂವಿಧಾನ ಗಟ್ಟಿಯಾಗಿಸಬೇಕು ಎಂದರು. ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿದರು.