ಸಂಡೂರು: ದೇವದಾಸಿ ಪುನರ್ವಸತಿ ಯೋಜನೆ ಬಲಗೊಳಿಸುವುದರ ಜತೆಗೆ ಐದು ಎಕರೆ ಕೃಷಿ ಭೂಮಿ ನೀಡಬೇಕು ಎಂದು ಸಿಪಿಐ (ಎಂ)ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಹೇಳಿದರು.
ತಾಲೂಕಿನ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ದೇವದಾಸಿ ಮಹಿಳಾ ವಿಮೋಚನಾ ಸಂಘದ ಜಾಗೃತಿ ಶಿಬಿರ ಉದ್ದೇಶಿಸಿ ಶನಿವಾರ ಮಾತನಾಡಿದರು.
ದೇವದಾಸಿ ಪದ್ಧತಿಯನ್ನು ಸಾಮಾಜಿಕ ಪಿಡುಗು ಎಂದು ಪರಿಗಣಿಸಬೇಕು. ವಿಮುಕ್ತ ದೇವದಾಸಿ ಮಹಿಳೆಯರ ಮಕ್ಕಳಿಗೆ ಉಚಿತ ಶಿಕ್ಷಣ, ಉದ್ಯೋಗ ನೀಡಬೇಕು. ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.
ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯಾಧ್ಯಕ್ಷೆ ಮಾಳಮ್ಮ, ಜಿಲ್ಲಾ ಗೌರವ ಅಧ್ಯಕ್ಷ ಎ.ಸ್ವಾಮಿ, ತಾಲೂಕು ಕಾರ್ಯದರ್ಶಿ ಎಚ್.ದುರ್ಗಮ್ಮ, ಪ್ರಮುಖರಾದ ಹುಲಿಗೆಮ್ಮ, ರೇಣುಕಮ್ಮ, ನಾಗರತ್ನಮ್ಮ, ಈರಮ್ಮ, ಮಹಾಲಕ್ಷ್ಮೀ, ಯಲ್ಲಮ್ಮದೇವಿ ಇತರರಿದ್ದರು.