ಹುಲಿಹೈದರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಸಮೀಕ್ಷಾ ಪ್ರಗತಿಯನ್ನು ತಹಸೀಲ್ದಾರ್ ವಿಶ್ವನಾಥ ಮುರುಡಿ ಪರಿಶೀಲಿಸಿದರು. ಸಿಬ್ಬಂದಿ ವಿಜಯಕುಮಾರ, ಶರಣಪ್ಪ, ಶಿಕ್ಷಕರಾದ ಖಾದ್ರಿ, ಬೂತ್ ಮಟ್ಟದ ಅಧಿಕಾರಿಗಳಿದ್ದರು. 
ಜಿಲ್ಲೆ

ಕಟ್ಟುನಿಟ್ಟಾಗಿ ಮತದಾರ ಪಟ್ಟಿ ಪರಿಷ್ಕರಣೆ ಮಾಡಿ

ರುದ್ರಪ್ಪ ವಾಲಿ

ಕನಕಗಿರಿ: ಆ.28ರಿಂದ 18ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದ್ದು, ಸಾರ್ವಜನಿಕರು ಮತದಾರರ ಸೇರ್ಪಡೆ, ತಿದ್ದುಪಡಿ, ತೆಗೆದು ಹಾಕುವುದಕ್ಕೆ ಅವಕಾಶವಿದ್ದು, ಸದುಪಯೋಗಪಡಿಸಿಕೊಳ್ಳುವಂತೆ ತಹಸೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು.

ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಭಾನುವಾರ ಬೂತ್ ಮಟ್ಟದ ಅಧಿಕಾರಿಗಳ ಸಮೀಕ್ಷೆಯ ಪ್ರಗತಿ ಪರಿಶೀಲನೆಯಲ್ಲಿ ಮಾತನಾಡಿದರು.
ತಾಲೂಕಿನ ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರತಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಜನರಿಗೆ ತಿದ್ದುಪಡಿ, ತೆಗೆದು ಹಾಕುವ ಅವಕಾಶವಿದ್ದು ಈ ಬಗ್ಗೆ ಜಾಗೃತಿ ಮೂಡಿಸಬೇಕು.

ಮತದಾರ ಪಟ್ಟಿ ಪರಿಷ್ಕರಣೆಗೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ತಿಳಿಸಲಾಗಿದೆ ಎಂದರು. ಸಿಬ್ಬಂದಿ ವಿಜಯಕುಮಾರ, ಶರಣಪ್ಪ, ಶಿಕ್ಷಕರಾದ ಖಾದ್ರಿ, ಬೂತ್ ಮಟ್ಟದ ಅಧಿಕಾರಿಗಳಿದ್ದರು.

ಪಹಣಿಗೆ ಆಧಾರ್ ಜೋಡಿಸಿ: ಪಹಣಿ ಹೊಂದಿದ ರೈತರು ತಮ್ಮ ಪಹಣಿಗೆ ಆಧಾರ್ ಸಂಖ್ಯೆ ಜೋಡಿಸಿಕೊಳ್ಳಬೇಕು. ಇದರಿಂದ ಸರ್ಕಾರಿ ಸೌಲಭ್ಯ ದೊರೆಯುವ ಸಾಧ್ಯತೆಗಳಿದ್ದು, ಯಾರು ಈ ಕಾರ್ಯದಿಂದ ವಂಚಿತರಾಗದೆ ಲೆಕ್ಕಾಧಿಕಾರಿಗಳನ್ನು ಭೇಟಿ ಮಾಡಿ ಪಹಣಿಗೆ ಆಧಾರ್ ಸಂಖ್ಯೆ ಜೋಡಿಸಿಕೊಳ್ಳುವಂತೆ ತಿಳಿಸಿದರು.