ಹುನಗುಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ ಡಾ. ಲಲಿತಾ ಹೊಸಪ್ಯಾಟಿ ಮಾತನಾಡಿದರು. ಲೇಖಕ ಎಸ್ಕೆ. ಕೊನೆಸಾಗರ, ಶರಣಪ್ಪ ಹೂಲಗೇರಿ ಇದ್ದರು. 
ಜಿಲ್ಲೆ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಶ್ರಮಿಸಿ

ಹುನಗುಂದ: ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡುವ ಮೂಲಕ ಅವರನ್ನು ಒಳ್ಳೆಯ ನಾಗರಿಕರನ್ನಾಗಿ ರೂಪಿಸುವುದು ಅಗತ್ಯವಾಗಿದೆ ಎಂದು ಸುವರ್ಣ ಪ್ರಶಸ್ತಿ ಪುರಸ್ಕೃತೆ ಲೇಖಕಿ ಡಾ. ಲಲಿತಾ ಹೊಸಪ್ಯಾಟಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗೆ ಅನುಗುಣವಾಗಿ ಪ್ರೋತ್ಸಾಹಿಸಿ ಅವರನ್ನು ದೇಶದ ಆಸ್ತಿಯನ್ನಾಗಿ ಪರಿವರ್ತಿಸಬೇಕು ಎಂದರು.

ಹಿರಿಯ ಲೇಖಕ ಎಸ್ಕೆ ಕೊನೆಸಾಗರ ಮಾತನಾಡಿ, ನೆಹರು ಅವರಿಗೆ ಮಕ್ಕಳೆಂದರೆ ಬಲು ಪ್ರೀತಿ. ಮಕ್ಕಳ ಭಾವನೆಯನ್ನು ಉಪೇಕ್ಷಿಸದೆ ಅವರಿಗೆ ಪ್ರೋತ್ಸಾಹಿಸಬೇಕು ಎಂದರು.

ಪ್ರಭಾರ ಪ್ರಾಚಾರ್ಯ ಶರಣಪ್ಪ ಹೂಲಗೇರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಹಾಂತೇಶ ಪರೂತಿ, ಸದಸ್ಯರಾದ ರೇಖಾ ಬ್ಯಾಳಿ, ನಿವೃತ್ತ ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ, ಕಾಲೇಜಿನ ಸಿಬ್ಬಂದಿ ಇದ್ದರು.

ಸೇವಂತಿ ಬೆಣಗಿ ಪ್ರಾರ್ಥಿಸಿದರು. ಉಪನ್ಯಾಸಕಿ ಛಾಯಾ ಪುರಂದರೆ ಸ್ವಾಗತಿಸಿದರು. ಐ.ಎಚ್. ನಾಯಕ ನಿರೂಪಿಸಿದರು. ಎಚ್.ಟಿ. ಅಗಸಿಮುಂದಿನ ವಂದಿಸಿದರು.