ಲಿಂಗಸುಗೂರು: ಭಾರತದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ. ಆಳುವವರು ಮತ್ತು ಆಳಲ್ಪಡುವವರು ಪ್ರಜೆಗಳೇ ಆಗಿರುವುದರಿಂದ ಹೆಚ್ಚು ಕಡಿಮೆ ಎಂಬ ತಾರತಮ್ಯವಿಲ್ಲ ಎಂದು ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ ಹೇಳಿದರು.
ಸಹಾಯಕ ಆಯುಕ್ತರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಶಿಕ್ಷಣ ಇಲಾಖೆ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೈಕ್ ರ‌್ಯಾಲಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ಭಾರತದಲ್ಲಿ ಪ್ರಜಾಪ್ರಭುತ್ವ ತನ್ನದೇ ಆದ ಮಹತ್ವ ಹೊಂದಿದ್ದು ಅದನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕಿದೆ ಎಂದರು. ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಟನೆ ಕಾರ್ಯಕರ್ತರು ಸಂವಿಧಾನ ಪೀಠಿಕೆ ಓದಿ ಮಹತ್ವ ಸಾರಿದರು.