ಶಿವಮೊಗ್ಗ: ಜಿಲ್ಲೆಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದವರನ್ನು ಈ ಬಾರಿಯ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ವಿಶೇಷವಾಗಿ ಗುರುತಿಸಿ ಗೌರವಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.
ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸುವ ಪರಂಪರೆ ಮುಂದುವರಿಸಬೇಕು. ಆ ಮೂಲಕ ಇಂದಿನ ಪೀಳಿಗೆಗೆ ಅವರ ಪರಿಚಯ ಮಾಡಿಕೊಡಬೇಕಾದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.