???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಸ್ಕ್ಯಾನಿಂಗ್ ವೈದ್ಯರಿಲ್ಲದೆ ಪರದಾಟ!

ಗಂಗಾಧರ ಬಿ ವಿ

* ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಸಮಸ್ಯೆ * ಆಮೆಗತಿಯಲ್ಲಿ ಸಾಗಿದ ನವೀಕರಣ ಕಾರ್ಯ

ಎಂ.ಎಸ್.ಸಿದ್ದಲಿಂಗೇಶ್ವರ ಮಾಗಡಿ

ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕಾÈನಿಂಗ್ ಮಾಡಲು ವೈದ್ಯರಿಲ್ಲದೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಾಲೂಕು ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಮಂದಿ ಚಿಕಿತ್ಸೆಗಾಗಿ ಬರುತ್ತಾರೆ. ಅದರಲ್ಲಿ 100ಕ್ಕೂ ಅಧಿಕ ಜನರಿಗೆ ಸ್ಕ್ಯಾನಿಂಗ್ ಅಗತ್ಯವಿದ್ದು, ಕಳೆದ 10 ದಿನಗಳ ಹಿಂದೆ ಸ್ಕ್ಯಾನಿಂಗ್ ವೈದ್ಯ ಹಾಗೂ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಜ್ಞಾನಪ್ರಕಾಶ್ ವರ್ಗಾವಣೆಯಾದ ನಂತರ ಸ್ಕ್ಯಾನಿಂಗ್ ಮಾಡಲು ವೈದ್ಯರಿಲ್ಲದೆ ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ.

ಬಡವರಿಗೆ ಆರ್ಥಿಕ ಹೊರೆ :

ಗರ್ಭಿಣಿಯರು, ಶಸ್ತçಚಿಕಿತ್ಸೆ, ನರರೋಗ ಸಂಬಂಧಿಸಿದಂತೆ ಪ್ರತಿನಿತ್ಯ 50ಕ್ಕೂ ಹೆಚ್ಚು ಮಂದಿ ಬಿಪಿಎಲ್ ಕಾರ್ಡ್ ಇದ್ದವರು ಕಡಿಮೆ ದರದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಲ್ಲಿ ವೈದ್ಯರಿಲ್ಲದ ಕಾರಣ ಖಾಸಗಿ ಲ್ಯಾಬ್‌ಗಳಲ್ಲಿ 1200 ರೂ. ಪಾವತಿಸಿ ಸ್ಕ್ಯಾನಿಂಗ್ ಮಾಡಿಸುವಂತಾಗಿದೆ.

ಇನ್ನೂ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಜತೆಗೆ ಆರೋಗ್ಯ ತಪಾಸಣೆ, ಚಿಕಿತ್ಸೆ ಪಡೆಯಬೇಕು. ಇಲ್ಲದಿದ್ದರೆ ಸ್ಕ್ಯಾನಿಂಗ್ ಇಲ್ಲ ಎಂದು ತಿಳಿಸುತ್ತಿದ್ದಾರೆ. ಇದರಿಂದ ಸಾವಿರಾರು ರೂಪಾಯಿ ನೀಡಿ ಚಿಕಿತ್ಸೆ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ.

ಜನಪ್ರತಿನಿಧಿಗಳು ಗಮನ ಹರಿಸಲಿ

ಶಾಸಕರು ತಾಲೂಕು ಆಸ್ಪತ್ರೆಯಲ್ಲಿರುವ ವೈದ್ಯರ ಸಮಸ್ಯೆ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗಮನಕ್ಕೆ ತಂದು ತುರ್ತಾಗಿ ಸ್ಕ್ಯಾನಿಂಗ್ ವೈದ್ಯರನ್ನು ನೇಮಿಸಿ ರೋಗಿಗಳಿಗೆ ಅನುಕೂಲ ಕಲ್ಪಿಸುವಂತೆ ನಾಗರಿಕರು ಒತ್ತಾಯಿಸಿದ್ದಾರೆ.

ಮಾಗಡಿ ಸರ್ಕಾರಿ ಆಸ್ಪತ್ರೆ ಕಟ್ಟಡವನ್ನು 4 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿದ್ದು, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ವೈದ್ಯರು, ರೋಗಿಗಳಿಗೆ ತೊಂದರೆ ಉಂಟಾಗುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಆಸ್ಪತ್ರೆಯ ಶೌಚಗೃಹ ಕಿತ್ತು ಹಾಕಿರುವುದರಿಂದ ತೊಂದರೆಯಾಗಿದೆ. ಒಂದಲ್ಲಾ ಒಂದು ಸಮಸ್ಯೆಯಲ್ಲಿರುವ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಯಾವಾಗ ಮುಕ್ತಿ ಸಿಗಲಿದೆ ಎಂದು ಕಾದುನೋಡಬೇಕಾಗಿದೆ.

ಸ್ಕ್ಯಾನಿಂಗ್ ವೈದ್ಯರು ಕೌನ್ಸಿಲಿಂಗ್ ಮೂಲಕ ವರ್ಗಾವಣೆಯಾಗಿದ್ದಾರೆ. ಇದರಿಂದ ಸ್ಕ್ಯಾನಿಂಗ್ ವೈಧ್ಯರ್ಯಾರೂ ಬಂದಿಲ್ಲ. ಈ ಬಗ್ಗೆ ಡಿಎಚ್‌ಒ ಗಮನಕ್ಕೆ ತಂದವೇಳೆ ಗುತ್ತಿಗೆ ಆಧಾರದ ಮೇಲೆ ಸ್ಕ್ಯಾನಿಂಗ್ ವೈದ್ಯರನ್ನು ನೇಮಕಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ತುರ್ತಾಗಿ ಸ್ಕ್ಯಾನಿಂಗ್ ಅವಶ್ಯಕತೆ ಇದ್ದವರಿಗೆ ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಲಾಗುತ್ತಿದೆ. | ಡಾ.ಮುರಳಿ ಮನೋಹರ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿತಾಲೂಕು ಆಸ್ಪತ್ರೆಯಲ್ಲೇ ಸ್ಕ್ಯಾನಿಂಗ್ ವೈದ್ಯರು ಇಲ್ಲ ಎಂದರೆ ಹೋಬಳಿ ವ್ಯಾಪ್ತಿ ಆಸ್ಪತ್ರೆಗಳ ಗತಿ ಏನು?. ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. | ಎಂ.ಆರ್.ರಾಘವೇಂದ್ರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ.