ಚಿಕ್ಕಬಳ್ಳಾಪುರ: ತಂದೆಯ ಸಾವಿನಿಂದ ಮನನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೌರಿಬಿದನೂರು ನಗರೆದ ನಾಗಿರೆಡ್ಡಿ ಲೇಔಟ್ನ ಸ್ವರ್ಣಾ (22) ಮೃತೆ. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್ ಇಲಿ ಪಾಷಾಣ ಸೇವಿಸಿದ್ದು, ಅಸ್ವಸ್ಥಗೊಂಡಿದ್ದ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು .ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಸ್ವರ್ಣಾ ತಂದೆ 3 ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಆಕೆ ಮಾನಸಿಕ ಖಿನ್ನತೆಗೊಳಗಾಗಿದ್ದಳು ಎನ್ನಲಾಗಿದೆ.