ಶ್ರೀನಿವಾಸ 
ಜಿಲ್ಲೆ

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

 ಕೊಪ್ಪ: ಪಟ್ಟಣದ ಹೊರವಲಯದ ಬಿಜಿಎಸ್ ವಿದ್ಯಾಸಂಸ್ಥೆಯ ವೆಂಕಟೇಶ್ವರ ವಿದ್ಯಾಮಂದಿರದಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿ ಶ್ರೀನಿವಾಸ ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿಯ ಪಾಲಕರು ನಿಲಯ ಪಾಲಕರ ವಿರುದ್ಧ ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೊಪ್ಪ ಪೊಲೀಸರು ಸಂಶಯಾಸ್ಪದ ಸಾವು ಎಂದು ದೂರು ದಾಖಲಿಸಿಕೊಂಡಿದ್ದಾರೆ.