ಚಿಕ್ಕಬಳ್ಳಾಪುರ: ತಾಲೂಕಿನ ಪೇರೇಸಂದ್ರದ ಖಾಸಗಿ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇರಳದ ವಯನಾಡಿನ ಮೊಹಮ್ಮದ್ ಶಬ್ಬೀರ್ (26) ಆತ್ಮಹತ್ಯೆ ಮಾಡಿಕೊಂಡವ. ಈತ ಆರ್ಸಿಟಿ ಅಲೈಡ್ ಸೈನ್ಸ್ ಕೋರ್ಸ್ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ. ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇನ್ನೂ ಯುವತಿಯೊಬ್ಬಳು ಈತನ ಮೊಬೈಲ್ ನಂಬರ್ ಬ್ಲಾಕ್ ಮಾಡಿ, ಮಾತಾಡದೇ ದೂರ ಉಳಿದಿದ್ದರಿಂದ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಪೆರೇಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.