ಜಿಲ್ಲೆ

ಶಾಲೆಗೆ ಹೋಗು ಎಂದಿದ್ದಕ್ಕೆ ಸತ್ತೇ ಹೋದ್ಲು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ!

Webdesk - Ravikanth

ಚಿಕ್ಕಬಳ್ಳಾಪುರ: ಮಕ್ಕಳು ಕ್ಷುಲ್ಲಕ ಕಾರಣಗಳಿಗೆ ಪ್ರಾಣ ಕಳೆದುಕೊಳ್ಳುವಂಥ ಪ್ರಕರಣಗಳು ಹೊಸದೇನಲ್ಲ. ಮೊನ್ನೆಮೊನ್ನೆಯಷ್ಟೇ ಯುವಕನೊಬ್ಬ ಮೊಬೈಲ್​​ಫೋನ್​ ಕೊಡಿಸಲಿಲ್ಲ ಎಂಬ ಕಾರಣಕ್ಕೇ ಬೆಂಕಿ ಹಾಕಿಕೊಂಡು ಜೀವ ಕಳೆದುಕೊಂಡಿದ್ದ.

ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ಹೋಗು ಎಂದಿದ್ದಕ್ಕೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರದ ವಾಪಸಂದ್ರ ಬಡಾವಣೆಯ ಬೇಬಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಚಿಕ್ಕಬಳ್ಳಾಪುರದ ವಾಪಸಂದ್ರ ಬಡಾವಣೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ಈಕೆ ಬರೀ ಶಾಲೆ ಹೋಗು ಎಂದ ಒಂದೇ ಮಾತಿಗೆ ಇಂಥದ್ದೊಂದು ಅನಾಹುತ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.