ಸಾಂದರ್ಭಿಕ ಚಿತ್ರ 
ಜಿಲ್ಲೆ

ಶಾಲೆಗೆ ಹೋಗಲು ಇಷ್ಟವಿಲ್ಲದೆ ನೇಣು ಹಾಕಿಕೊಂಡ ಬಾಲಕ!

Webdesk - Ravikanth

ರಾಯಚೂರು: ಶಾಲೆಗೆ ಹೋಗಲು ಇಷ್ಟವಿಲ್ಲ ಎಂಬ ಒಂದೇ ಕಾರಣಕ್ಕೆ ಇಲ್ಲೊಬ್ಬ ಬಾಲಕ ನೇಣು ಹಾಕಿಕೊಂಡು ಸಾವಿಗೆ ಮೊರೆ ಹೋಗಿದ್ದಾನೆ. ರಾಯಚೂರು ಜಿಲ್ಲೆಯ ಶಾಲೆಯ ಆವರಣದಲ್ಲೇ ಇಂಥದ್ದೊಂದು ದಯನೀಯ ಪ್ರಕರಣ ನಡೆದುಹೋಗಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿ ಈ ಪ್ರಕರಣ ನಡೆದಿದೆ. ಲಿಂಗಸಗೂರು ತಾಲೂಕಿನ ಅನ್ವರಿ ಗ್ರಾಮದ ಗಂಗಣ್ಣ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ ಈತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಬಾಲಕ, ಇಂದು ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದ. ಬಳಿಕ ಈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.