ಮುಂಡರಗಿ: ಪಟ್ಟಣದ ಜಗದ್ಗುರು ತೋಂಟದಾರ್ಯ ಕೋಟೆ (ಜೆ.ಟಿ. ಕೋಟೆ) ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬುಧವಾರ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಶಿವಾನಂದ ಇಟಗಿ ಅವರು ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆಗಳನ್ನು ವಿತರಿಸಿದರು.
ನಂತರ ಮಾತನಾಡಿದ ಅವರು, ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆಯು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲಿದೆ. ದೇಶದಲ್ಲಿ ಶಿಕ್ಷಣ ಕ್ಷೇತ್ರವು ಉನ್ನತ ಹಾದಿಯಲ್ಲಿ ಸಾಗುತ್ತಿದ್ದು, ಅದಕ್ಕೆ ಪೂರಕವಾಗಿ ಇಂತಹ ಹಲವು ಅವಕಾಶಗಳ ಸದುಪಯೋಗ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ಮಕ್ಕಳು ಮುಂದಾಗಬೇಕು. ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಮುಖ್ಯಶಿಕ್ಷಕ ಮಂಜುನಾಥ ತೆಗ್ಗಿನಮನಿ, ಪತ್ರಕರ್ತ ಸಂತೋಷ ಮುರಡಿ ಮಾತನಾಡಿದರು. ಶಿಕ್ಷಕರಾದ ಪ್ರದೀಪ ನಾಯಕ, ಶಶಿಧರ ಅಡರಕಟ್ಟಿ, ಬಸವರಾಜ ಕುರಿ ಇತರರು ಇದ್ದರು.