ಜಿಲ್ಲೆ

SSLC ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ; ಮಗನಿಗಾಗಿ ಕಣ್ಣೀರಿಟ್ಟ ಪೋಷಕರು

 ಬೆಂಗಳೂರು: ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಯುವಕನೋರ್ವ ಫಲಿತಾಂಶ​​ ಬರುವ ಮುನ್ನವೇ ನಾಪತ್ತೆಯಾಗಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ನಡೆದಿದೆ.

ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್​ ಗೌಡ(16) ರಿಸಲ್ಟ್​ಗೆ ಭಯಬಿದ್ದು ನಾಪತ್ತೆಯಾಗಿದ್ದಾನೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ  ನಾಪತ್ತೆಯಾಗಿದ್ದಾನೆ. ಈತ ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯ ನಿವಾಸಿಯಾಗಿದ್ದಾನೆ.

ಸುರೇಶ್​ ಮತ್ತು ರೂಪ ದಂಪತಿ ಪುತ್ರ ಚಂದನ್​ ಗೌಡ ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಮಗನ ಫೋಟೋ ಹಿಡಿದು ಪೋಷಕರು ಹುಡುಕಾಡುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು ಟಾಪ್ ಆಗಿ ಹೊರಹೊಮ್ಮಿದ್ದಾಳೆ. 625ಕ್ಕೆ 625 ಅಂಕ ಪಡೆದಿದ್ದಾಳೆ. ಅಂಕಿತಾ ಕೊನ್ನೂರು ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ. 7 ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ ಸಿಕ್ಕಿದೆ. ಬೆಂಗಳೂರಿನ ವಿದ್ಯಾರ್ಥಿನಿ ಮೇಧಾ ಪಿ. ಶೆಟ್ಟಿ ಮಧುಗಿರಿಯ ವಿದ್ಯಾರ್ಥಿನಿ ಡಿ.ಎಂ.ಹರ್ಷಿತಾ, ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ ಚಿನ್ಮಯ್, ಚಿಕ್ಕೋಡಿಯ ವಿದ್ಯಾರ್ಥಿ ಸಿದ್ಧಾಂತ್, ಶಿರಸಿಯ ವಿದ್ಯಾರ್ಥಿ ದರ್ಶನ್, ಚಿನ್ಮಯ್, ಶ್ರೀರಾಮ್ 625ಕ್ಕೆ 624 ಪಡೆದಿದ್ದಾರೆ.