ಜಿಲ್ಲೆ

ಸಿಡಿಲು ಬಡಿದು ವಿದ್ಯಾರ್ಥಿ ಸಾವು

Uttara Kannada - Subash Hegde

ಶಿರಸಿ:ಸಿಡಿಲು ಬಡಿದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ತಾಲೂಕಿನ ಬನವಾಸಿಯಲ್ಲಿ ನಡೆದಿದೆ. ಸಾಜೀದ್‌ ಅಶ್ಪಾಕಲಿ ಶೇಖ್‌(16) ಮೃತರು.

ಶನಿವಾರ ಮಧ್ಯಾಹ್ನ ಕ್ರಿಕೆಟ್‌ ಆಡುವ ಸಂದರ್ಭದಲ್ಲಿ ಸಿಡಿಲು ಹೊಡೆದು ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಅಷ್ಟು ಹೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಬನವಾಸಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

ಶಿರಸಿಯಲ್ಲಿ ಸತತ ಮೂರನೇ ದಿನ ಮಳೆಯಾಗುತ್ತಿದೆ. ಶನಿವಾರ ತಾಲೂಕಿನಾದ್ಯಂತ ಗುಡುಗು, ಸಿಡಿಲಿನ ಅಬ್ಬರ ಹೆಚ್ಚಿದ್ದು, ವಿದ್ಯುತ್‌ ಕೈಕೊಟ್ಟಿದೆ. ʼ

ಮೀನುಗಾರರಿಗೆ ಎಚ್ಚರಿಕೆ

ಜಿಲ್ಲೆಯಲ್ಲಿ ಮೇ 19 ರಂದು ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಶನಿವಾರ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಮಂದಿನ ಐದು ದಿನದಲ್ಲಿ ಸಣ್ಣದಾಗಿ ಮಳೆಯಾಗಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಮೇ 20 ರಿಂದ 22 ರವರೆಗೆ ಅರಬ್ಬಿ ಸಮುದ್ರದ ಕಡೆಯಿಂದ ಭಾರಿ ಗಾಳಿ ಬೀಸುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಗಾಳಿಯು ಪ್ರತಿ ಗಂಟೆಗೆ 20 40 ರಿಂದ 65 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ನೀಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.