ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹೂವಿನಹಡಗಲಿಯಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಸಮಾಜದ ತಾಲೂಕು ಅಧ್ಯಕ್ಷ ಮೌನೇಶ್ವರ ಉದ್ಘಾಟಿಸಿದರು. ನಿವೃತ್ತ ಶಿಕ್ಷಕ ವೇದಮೂರ್ತಿ, ಸಂಘದ ತಾಲೂಕು ಅಧ್ಯಕ್ಷ ಉಮಾಪತಿ ಅಕ್ಕಸಾಲಿ, ಉಪಾಧ್ಯಕ್ಷ ಚಂದ್ರಪ್ಪ, ಗೌರವಾಧ್ಯಕ್ಷ ಸೋಮಶೇಖರ ಇತರರಿದ್ದರು. 
ಜಿಲ್ಲೆ

ವಿದ್ಯಾರ್ಥಿಗಳಿಗೆ ಒತ್ತಡ ಹಾಕದಿರಿ

Kopala - Desk - Eraveni

ಹೂವಿನಹಡಗಲಿ: ಮಕ್ಕಳನ್ನು ಅಂಕಗಳ ಹಿಂದೆ ಓಡುವಂತೆ ಮಾಡುತ್ತಿದ್ದೇವೆ ಅವರಿಗೆ ಎಲ್ಲರೊಂದಿಗೆ ಸಹಬಾಳ್ವೆಯಿಂದ ಬುದುಕುವುದು ಕಲಿಸಬೇಕು ಎಂದು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಮೌನೇಶ್ವರ ಹೇಳಿದರು.

ತಾಲೂಕು ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಸಮಾಜದ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಹಿಂದುಳಿದ ವಿದ್ಯಾವಂತ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕಾಗಿದೆ. ಮಕ್ಕಳು ಮುಂದೆ ಸಮಾಜ ಕಟ್ಟುವವರಾಗಿದ್ದಾರೆ. ಪಾಲಕರು ಮಕ್ಕಳಿಗೆ ಒತ್ತಡ ಹಾಕದೆ ಅವರ ಇಷ್ಟದ ವಿಷಯ ಅಧ್ಯಯನ ಮಾಡಲು ಪ್ರೋತ್ಸಾಹಿಸಿ ಎಂದರು.

ನಿವೃತ್ತ ಶಿಕ್ಷಕ ವೇದಮೂರ್ತಿ ಮಾತನಾಡಿ, ವಿಶ್ವಕರ್ಮರು ಈ ನಾಡಿನಲ್ಲಿ ಕಲೆ ಮತ್ತು ಸಂಸ್ಕೃತಿ ಕಟ್ಟಿಕೊಟ್ಟಿದ್ದಾರೆ. ಕರಕುಶಲ ಕಲೆಗಳು ಇಂದಿನ ಆಧುನಿಕ ಜೀವನ ಶೈಲಿಯಿಂದಾಗಿ ಕಣ್ಮರೆಯಾಗುತ್ತಿವೆ ಎಂದರು.

ನಿವೃತ್ತ ಶಿಕ್ಷಕ ಶಿಲ್ಪಿ ಶಾಮಸುಂದರಾಚಾರ್, ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಉಮಾಪತಿ ಅಕ್ಕಸಾಲಿ, ಉಪಾಧ್ಯಕ್ಷ ಚಂದ್ರಪ್ಪ, ಗೌರವಾಧ್ಯಕ್ಷ ಸೋಮಶೇಖರ, ಶಿಕ್ಷಕ ವೀರೇಶ ಇತರರಿದ್ದರು.