suicide 
ಜಿಲ್ಲೆ

ವಿದ್ಯಾರ್ಥಿ ಆತ್ಮಹತ್ಯೆ

ನಾಗೇಶ ಎಸ್

ಗೋಣಿಕೊಪ್ಪಲು: ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಬುಧವಾರ ರಾಯಚೂರು ಮೂಲದ ತೇಜಸ್ವಿನಿ ಎಂಬ 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲೇ ಶುಕ್ರವಾರ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ 8.30ರ ಸಮಯದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.