ಜಿಲ್ಲೆ

ಯೂಟ್ಯೂಬ್ ನೋಡಿ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಯುಟ್ಯೂಬ್ ವಿಡಿಯೋಗಳನ್ನು ನೋಡಿ ಪ್ರಯೋಗ ಮಾಡುವ ಅಭ್ಯಾಸವನ್ನು ಹೊಂದಿದ್ದ 6ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಶನಿವಾರ ಬ್ರಹ್ಮಗಿರಿಯಲ್ಲಿ ನಡೆದಿದೆ.

ಮಂಗಳಾದೇವಿ (11) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ಹೆತ್ತವರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮಕರ ಸಂಕ್ರಾಂತಿ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿ ಒಬ್ಬಳೇ ಇದ್ದು, ಬೆಡ್‌ರೂಮ್‌ನ ಬಾತ್ ರೂಮಿನಲ್ಲಿ ಬಟ್ಟೆ ಇಡುವ ರಾಡ್‌ಗೆ ಚೂಡಿದಾರ ಶಾಲು ಕಟ್ಟಿ ಆತ್ಮಹತ್ಯೆ ಪ್ರಯೋಗ ಮಾಡಲು ಹೋಗಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಮೃತಳಾಗಿದ್ದಾಳೆ. ಪೊಲೀಸರು ಈಕೆಯ ಟ್ಯಾಬ್ ವಶಕ್ಕೆ ಪಡೆದಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.