ಬಾಳೆಹೊನ್ನೂರು: ವಿವಿಧ ಸೌಲಭ್ಯ ವಂಚಿತವಾಗಿರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಸಹಿತ ವ್ಯವಸ್ಥಿತವಾಗಿ ಅಂತರ್ಜಾಲದ ಮೂಲಕ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ನ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್ ಹೇಳಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ವಿಭಾಗದ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ನಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಟ್ಯಾಬ್ ಹಾಗೂ ಲ್ಯಾಪ್ಟ್ಯಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾಳಜಿಯಿಂದ ಹಾಗೂ ಮಕ್ಕಳು ಮನೆಯಲ್ಲೇ ಕುಳಿತು ಶಿಕ್ಷಣ ಪಡೆಯಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ 20 ಸಾವಿರ ಟ್ಯಾಬ್ ಹಾಗೂ 10 ಸಾವಿರ ಲ್ಯಾಪ್ಟಾಪ್ ನೀಡಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.