ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಮೊದಲಾದವರಿದ್ದರು. 
ಜಿಲ್ಲೆ

ಕ್ಷುಲ್ಲಕ ಕಾರಣಗಳಿಗಾಗಿ ಅತಿರೇಕದ ನಡೆ: ಎಸಿಪಿ ಮನೋಜ್ ಕುಮಾರ್ ನಾಯಕ್ ವಿಷಾದ

ಸೌಮ್ಯ ಆರ್

ಬೆಳ್ತಂಗಡಿ: ಯುವಜನತೆ ಕ್ಷುಲ್ಲಕ ಕಾರಣಗಳಿಗಾಗಿ ಅತಿರೇಕದ ಕ್ರಮಗಳನ್ನು ಕೈಗೊಳ್ಳುವುದು ಬಹಳ ನೋವಿನ ಸಂಗತಿ ಎಂದು ಮಂಗಳೂರು ಉತ್ತರ ವಲಯದ ಸಹಾಯಕ ಪೊಲೀಸ್ ಆಯುಕ್ತ, ಉಜಿರೆ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಹಳೇ ವಿದ್ಯಾರ್ಥಿ ಮನೋಜ್ ಕುಮಾರ್ ನಾಯಕ್ ಹೇಳಿದರು.

ಮಂಗಳವಾರ ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಮಾತನಾಡಿ, ನಾಯಕತ್ವವೆಂಬುದು ರಾಜಕೀಯಕ್ಕೆ ಸೀಮಿತವಲ್ಲ. ಜೀವನದಲ್ಲಿ ನಾಯಕತ್ವ ಮುಖ್ಯ. ನಮ್ಮ ಸಂಸ್ಥೆಯಲ್ಲಿ ಕಲಿತ ಮನೋಜ್ ಕುಮಾರ್ ನಾಯಕ್ ಶಿಸ್ತು, ಪರಿಶ್ರಮ ಹಾಗೂ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ, ಪ್ರಮಾಣವಚನ ಬೋಧಿಸಿದರು. ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ‘ಚಿಗುರು’ ಹಾಗೂ ಉದ್ಘಾಟನಾ ಸಮಾರಂಭದ ಚಿತ್ರಣಗಳನ್ನೊಳಗೊಂಡ ‘ಚಿಗುರು’ ಭಿತ್ತಿಪತ್ರಿಕೆ ಬಿಡುಗಡೆಗೊಂಡಿತು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೇಯಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನ ಸಂಘದ ಅಧ್ಯಕ್ಷ ಸುದೇಶ್ ಸ್ವಾಗತಿಸಿದರು. ಧರಿತ್ರಿ ಭಿಡೆ ಅತಿಥಿ ಪರಿಚಯ ನೀಡಿದರು. ವೀಕ್ಷಾ ವಂದಿಸಿದರು. ಮಾನಸ ಅಗ್ನಿಹೋತ್ರಿ ಮತ್ತು ರುಚಿರಾ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿಗಳು ವಿವಿಧ ರಾಜಕೀಯ ಪಕ್ಷಗಳ ಸಿದ್ಧಾಂತಗಳಿಂದ ಪ್ರೇರಿತರಾಗಿ ಹೊಡೆದಾಟ, ವೈಷಮ್ಯದಿಂದ ಇರುವುದರ ಬದಲು ಪರಸ್ಪರ ಪ್ರೀತಿ, ವಿಶ್ವಾಸದಿಂದಿದ್ದು, ವ್ಯಕ್ತಿತ್ವ ವಿಕಸನ ಹೊಂದಬೇಕು. ಈ ಉದ್ದೇಶದಿಂದ ಅಂದಿನ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ಅವರ ಪರಿಕಲ್ಪನೆಯಂತೆ ವಿಭಿನ್ನ ರೀತಿಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿ ಸಂಘ ಕಾರ್ಯನಿರ್ವಹಿಸುತ್ತಿದೆ. - ಡಾ.ಬಿ.ಎ.ಕುಮಾರ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲ