ವಿಜಯವಾಣಿ ಸುದ್ದಿಜಾಲ ಧಾರವಾಡ
ಇಲ್ಲಿನ ಜೆಎಸ್ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಕಾಲೇಜಿನ 2024-2025ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ವಿಭಾಗಗಳ ಉದ್ಘಾಟನಾ ಸಮಾರಂಭವನ್ನು ನ. 21ರಂದು ಬೆಳಗ್ಗೆ 10.15ಕ್ಕೆ ಜೆಎಸ್ಎಸ್ ಸನ್ನಿಧಿ ಕಲಾ ಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.
ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಚಾರ್ಯ ಡಾ. ಕೆ.ಎಚ್. ನಾಗಚಂದ್ರ, ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಎಂಸಿಎ ಇನ್ಸಿಟ್ಯೂಟ್ ನಿರ್ದೇಶಕ ಡಾ. ಸೂರಜ್ ಜೈನ್ ಉಪಸ್ಥಿತರಿರುವರು. ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ. ಅಜಿತಪ್ರಸಾದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕ್ರೀಡಾ ವಿಭಾಗದ ಮುಖ್ಯಸ್ಥ ಜಿನ್ನಪ್ಪಾ ಕುಂದಗೋಳ ತಿಳಿಸಿದ್ದಾರೆ.