ಜಿಲ್ಲೆ

ವಿದ್ಯಾರ್ಥಿ ಸಂಘ ಉದ್ಘಾಟನೆ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ

ಇಲ್ಲಿನ ಜೆಎಸ್​ಎಸ್​ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ವಿಭಾಗಗಳ ಉದ್ಘಾಟನಾ ಸಮಾರಂಭವನ್ನು ನ. 21ರಂದು ಬೆಳಗ್ಗೆ 10.15ಕ್ಕೆ ಜೆಎಸ್​ಎಸ್​ ಸನ್ನಿಧಿ ಕಲಾ ಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.

ಹು-ಧಾ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಚಾರ್ಯ ಡಾ. ಕೆ.ಎಚ್​. ನಾಗಚಂದ್ರ, ಜೆಎಸ್​ಎಸ್​ ಶ್ರೀ ಮಂಜುನಾಥೇಶ್ವರ ಎಂಸಿಎ ಇನ್ಸಿಟ್ಯೂಟ್​ ನಿರ್ದೇಶಕ ಡಾ. ಸೂರಜ್​ ಜೈನ್​ ಉಪಸ್ಥಿತರಿರುವರು. ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ. ಅಜಿತಪ್ರಸಾದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕ್ರೀಡಾ ವಿಭಾಗದ ಮುಖ್ಯಸ್ಥ ಜಿನ್ನಪ್ಪಾ ಕುಂದಗೋಳ ತಿಳಿಸಿದ್ದಾರೆ.