ಜಿಲ್ಲೆ

ವಿದ್ಯಾರ್ಥಿಗಳ ಸಾಧನೆ

Dharwada - Vikram Nadiger

ಧಾರವಾಡ: ಇತ್ತೀಚೆಗೆ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪದ ಡಿಪಿಇಪಿ ಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಶಾಂಭವಿ ಪಾಟೀಲ ಹಾಗೂ ಸಂಗಡಿಗರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಿರಿಯರ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಶಾಂತಾ ಪಾಟೀಲ ಪ್ರಥಮ, ಜಾನಪದ ನೃತ್ಯ ಸ್ಪರ್ಧೆ, ಕಿರಿಯರ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಶ್ರೇಯಾ ನಂದೆಪ್ಪನವರ ತೃತೀಯ, ಹಿರಿಯರ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಸಂದೀಪ ಗುಳಗಣ್ಣವರ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಎಸ್​ಡಿಎಂಸಿ ಅಧ್ಯಕ್ಷರು, ಮುಖ್ಯ ಗುರುಗಳು, ಶಿಕ್ಷಕರು, ಗ್ರಾಮಸ್ಥರು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.