ಜಿಲ್ಲೆ

ಚಿತ್ರಕಲಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಧನೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇತ್ತೀಚೆಗೆ ನಡೆಸಿದ 2024- 25 ನೇ ಸಾಲಿನ ಲೋವರ್- ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ತಾಲೂಕಿನ ಯಾದವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಸಯ್ಯ ಹಂಚಿನಾಳಮಠ ಪ್ರಥಮ, ರಾಧಿಕಾ ಮಠಪತಿ ದ್ವಿತೀಯ, ಶಬನಮ್ ಘಾಟಿನ್ ಹಾಗೂ ಸುಮಾ ಮದಗುಣಕಿ ತೃತೀಯ ಸ್ಥಾನ ಪಡೆದಿದ್ದಾರೆ. ಚಿತ್ರಕಲಾ ಶಿಕ್ಷಕ ಸಿಕಂದರ್ ಹೊಸಳ್ಳಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಸಾಧಕ ವಿದ್ಯಾರ್ಥಿಗಳನ್ನು ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಅಭಿನಂದಿಸಿದ್ದಾರೆ.