ಕುಂದಾಪುರ: ವಿದ್ಯಾರ್ಥಿ ಜೀವನ ಒಂದು ಸುವರ್ಣಾವಕಾಶವಾಗಿದೆ. ವಿದ್ಯಾರ್ಥಿಗಳು ಸವಾಜದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಭಂಡಾರ್ಕಾರ್ಸ್ ಪದವಿ ಕಾಲೇಜು ಟ್ರಸ್ಟ್ ಉಪಾಧ್ಯಕ್ಷ ಕೆ. ಶಾಂತಾರಾಮ ಪ್ರಭು ಹೇಳಿದರು.
ಕುಂದಾಪುರದ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸೋಮವಾರ ನಡೆದ ವಿದ್ಯಾರ್ಥಿ ಪರಿಚಯ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು.
ಪ್ರಾಧ್ಯಾಪಕರಾದ ವಿಜಯಲಕ್ಷ್ಮೀ ಶೆಟ್ಟಿ ಕಾಲೇಜಿನ ಸೌಲಭ್ಯಗಳ, ಗಣೇಶ್ ಕೆ. ಪದವಿ ಅಧ್ಯಯನ ಪಠ್ಯಕ್ರಮ, ನಿಶಾ ಎಂ. ವಿದ್ಯಾರ್ಥಿ ವೇತನ ಮತ್ತು ಮುಕುಂದ ಭಟ್ ಇವರು ಕಂಪ್ಯೂಟರ್ ಆಧಾರಿತ ಹಾಜರಾತಿ ಮತ್ತು ಯು.ಯು.ಸಿ.ಎಂ.ಎಸ್ ಕುರಿತು ವಾಹಿತಿ ನೀಡಿದರು.
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಮ್. ಗೊಂಡ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಉಪನ್ಯಾಸಕಿ ಅಕ್ಷತಾ ನಿರೂಪಿಸಿದರು.