ಹೂವಿನಹಡಗಲಿ: ಶಾಲಾ- ಕಾಲೇಜು ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರ ಬಂದು ಅಭ್ಯಾಸದತ್ತ ಗಮನ ಹರಿಸಬೇಕು ಎಂದು ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಹವಾಲ್ದಾರ್ ಹೇಳಿದರು.
ಪಟ್ಟಣದ ಜಿಬಿಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿAದ ಗುರುವಾರ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಗಾರ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಅಮೇರಿಕ ಸೇರಿದಂತೆ ಜಗತ್ತಿನ ಇತರೆ ರಾಷ್ಟçಗಳು ಆರ್ಥಿಕ ರಂಗ ಸೇರಿದಂತೆ ಇತರೆ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ಸಾಗಿವೆ. ಭಾರತ ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಹೊಂದಬೇಕಾದರೆ ಯುವ ಶಕ್ತಿಯ ಪರಿಶ್ರಮ ಹೆಚ್ಚಿದೆ. ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿ ಅನೇಕ ಸಾಧಕರು ಸಾಧನೆ ಮಾಡಿ ಇತಿಹಾಸ ಸೇರಿದ್ದಾರೆ. ಕನ್ನಡ ಮಾಧ್ಯಮವೆಂದು ಕನಿಷ್ಠವಾಗಿ ಕಾಣದೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ನೀಡಿ, ಉಪನ್ಯಾಸಕರು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಾಯ ಮಾಡಬೇಕು ಎಂದರು.
ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸಂಘದ ಜಿಲ್ಲಾಧ್ಯಕ್ಷ ಗೌಡ್ರು ಬಸವರಾಜಪ್ಪ ಮಾತನಾಡಿ, ಜ್ಞಾನದ ಮೇಲೆ ಈ ಜಗತ್ತು ನಿಂತಿದ್ದು ಜ್ಞಾನವನ್ನು ಹೆಚ್ಚು ಸಂಪಾಧಿಸಿದವರು ಸಾಧನೆಯನ್ನು ಮಾಡುತ್ತಾರೆ. ಪ್ರಸ್ತುತ ಯುವ ಶಕ್ತಿಯು ದೇಶದ ನವ ಚೈತನ್ಯವಾಗಿದೆ. ವಾಮನ ರೂಪದಿಂದ ಮಕ್ಕಳು ಬದಲಾಗಿ ಜ್ಞಾನದಾಯಿಗಳಾಗಬೇಕು ಎಂದರು.
ಬಿಜಿಆರ್ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಪಾಟೀಲ ಮಾತನಾಡಿ, ಉಪನ್ಯಾಸಕರಿಗೆ ಮತ್ತು ಮಕ್ಕಳಿಗೆ ಶೈಕ್ಷಣಿಕ ಕಾರ್ಯಗಾರಗಳ ಅಗತ್ಯತೆ ಇದೆ. ವಿದ್ಯಾರ್ಥಿ ಜೀವನ ಬದುಕಿನ ಬಹಮುಖ್ಯ ಘಟ್ಟವಾಗಿದೆ ಈ ಹಂತದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ಹೊಂದಿ ಶಿಕ್ಷಣವನ್ನು ಪಡೆಯಬೇಕು ಎಂದರು.
ಇದೇ ವೇಳೆ ೨೦೨೨-೨೩ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ವೇದಿಕೆ ಮೇಲೆ ಪದವಿ ಪೂರ್ವ ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷ ಬಸೆಟ್ಟಿ ಪ್ರಕಾಶ, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಪ್ಪ ಬಡಿಗೇರ, ಖಜಾಂಚಿ ಎಂ.ಶಿವಪ್ಪ, ರಾಜ್ಯ ಪದವಿ ಪೂರ್ವ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ, ಜಿಬಿಆರ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅಮರೇಗೌಡ, ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಡಿ.ಸತೀಶ, ಕೋರಿ ಹಾಲೇಶ ಹಾಗೂ ಇತರ ಉಪನ್ಯಾಸಕರು ಹಾಜರಿದ್ದರು.