ಚಿಕ್ಕೋಡಿ ಸಿಎಲ್‌ಇ ಸಂಸ್ಥೆಯ ಕೆ.ಕೆ ಸಿಬಿಎಸ್‌ಇ ಶಾಲೆಯಲ್ಲಿ ಚುನಾವಣೆ ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು. ಪ್ರಾಚಾರ್ಯೆ ಸ್ಮಿತಾ ಶಿಂಧೆ, ಕನಿಷ್ಕ ಕಾಂಬಳೆ, ಶ್ರೀನಿಧಿ ಘೋಸರವಾಡೆ ಇತರರಿದ್ದರು. 
ಜಿಲ್ಲೆ

ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆ ತಿಳಿದುಕೊಳ್ಳಲಿ

ಪ್ರಶಾಂತ ಹೂಗಾರ

ಚಿಕ್ಕೋಡಿ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಪ್ರಜಾಪ್ರಭುತ್ವದ ಭಾಗವಾಗಿರುವ ಚುನಾವಣೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಲು ಹಾಗೂ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಶಾಲಾ ಸಂಸತ್ತು ಸಹಕಾರಿಯಾಗಿದೆ ಎಂದು ಪ್ರಾಚಾರ್ಯೆ ಸ್ಮಿತಾ ಶಿಂಧೆ ತಿಳಿಸಿದರು.

ಪಟ್ಟಣದ ಸಿಎಲ್‌ಇ ಸಂಸ್ಥೆಯ ಕೆ.ಕೆ ಸಿಬಿಎಸ್‌ಇ ಶಾಲೆಯಲ್ಲಿ ಇವಿಯಂ, ಬ್ಯಾಲೆಟ್ ಪೇಪರ್ ಹಾಗೂ ಚುನಾವಣೆ ಪ್ರಕ್ರಿಯೆ ಕುರಿತು ಈಚೆಗೆ ಹಮ್ಮಿಕೊಂಡಿದ್ದ ಜಾಗೃತಿ ಹಾಗೂ ಸಂಸತ್ತು ರಚನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲಕರ ವಿಭಾಗದಲ್ಲಿ ಕನಿಷ್ಕಾ ಕಾಂಬಳೆ, ಬಾಲಕಿಯರ ವಿಭಾಗದಲ್ಲಿ ಶ್ರೀನಿಧಿ ಘೋಸರವಾಡೆ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಶಾಲೆಯ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.