ಗುಳೇದಗುಡ್ಡ ತೋಗಣಶಿಯಲ್ಲಿನ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆಯನ್ನು ಪ್ರಾಚಾರ್ಯ ಪ್ರವೀಣ ಗುಂಡಗಾವಿ, ರಾಜಶೇಖರ ಬೆಂಗೊಲಿ ನೆರವೇರಿಸಿದರು. 
ಜಿಲ್ಲೆ

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಿ

ದತ್ತಾತ್ರೇಯ ಪಿ ಕುಲಕರ್ಣಿ

ಗುಳೇದಗುಡ್ಡ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಶಾಲಾ ಸಂಸತ್ತು ಮತ್ತು ಚುನಾವಣೆಗಳು ತನ್ನದೆ ಆದ ಪ್ರಮುಖ ಪಾತ್ರವಹಿಸುತ್ತವೆ ಎಂದು ಬಾಗಲಕೋಟೆ ಬಸವೇಶ್ವರ ಪ್ರೌಢಶಾಲೆಯ ಪ್ರಾಚಾರ್ಯ ಪ್ರವೀಣ ಗುಂಡಗಾವಿ ಹೇಳಿದರು.

ಸಮೀಪದ ತೋಗುಣಶಿಯಲ್ಲಿನ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ  ಹಮ್ಮಿಕೊಂಡಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಲಾ ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಕ್ಕಳು ನಾಯಕತ್ವದ ಗುಣ ಬೆಳೆಸಿಕೊಳ್ಳಲು ಶಾಲಾ ಸಂಸತ್ತು ಸಹಕಾರಿಯಾಗುತ್ತದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಪ್ರಮುಖ ಅಂಗಗಳಾಗಿವೆ. ವಿದ್ಯಾರ್ಥಿಗಳು ಪಠ್ಯದ ಜತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

ಶಾಲಾ ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆ ಪ್ರಾಚಾರ್ಯ ರಾಜಶೇಖರ ಬೆಂಗೊಲಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಮಾಜಿ ಸೈನಿಕ ಗಂಗಾಧರ ಲಮಾಣಿ ಇದ್ದರು.