ಮಂಡ್ಯ: ನಗರದ ಮಹಿಳಾ ಸರ್ಕಾರಿ ಕಾಲೇಜಿನ ಎದುರಿನ ಸ್ಕೈವಾಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ನಗರದ ಉದಯಗಿರಿ ಬಡಾವಣೆಯ ಡ್ಯಾನಿಯಲ್(23) ಹಾಗೂ ಜೇಸುಅಲೆಕ್ಸ್ (20) ಮೃತ ದುರ್ದೈವಿಗಳು. ಇಬ್ಬರು ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಬುಲೆಟ್‌ನಲ್ಲಿ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೈವಾಕ್‌ನ ಕಬ್ಬಿಣದ ಕಂಬಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಿಮ್ಸ್‌ನ ಶವಾಗಾರದಲ್ಲಿ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.