ಹಾರನಹಳ್ಳಿ ಸರ್ಕಾರಿ ಪ್ರೌಢಶಾಲೆಯ 2005-06ನೇ ಸಾಲಿನ ಎಸ್.ಎಸ್.ಎಲ್.ಸಿ ಯ ಹಿರಿಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ನಡೆದ ಸ್ಪರ್ಧೆಯ ವಿಜೇತ ಶಿಕ್ಷಕರಿಗೆ ಬಹುಮಾನ ನೀಡಲಾಯಿತು. ಸಿ.ಎಚ್ ಚಂದ್ರೇಗೌಡ, ಎ.ಎನ್ ಶಿವಣ್ಣ, ಎಚ್.ಡಿ ವಾಸು ಇತರರಿದ್ದರು. 
ಜಿಲ್ಲೆ

ಶಿಕ್ಷಕರಿಗೆ ಬಹುಮಾನ ವಿತರಿಸಿದ ವಿದ್ಯಾರ್ಥಿಗಳು

ಶಿವಶಂಕರ್ ಎಂ. ಹೆಬ್ಬಳ್ಳ

ಬೆಟ್ಟದಪುರ: ಬೆಟ್ಟದಪುರ ಸಮೀಪದ ಹಾರನಹಳ್ಳಿ ಸರ್ಕಾರಿ ಪ್ರೌಢಶಾಲೆಯ 2005-06 ನೇ ಸಾಲಿನ ಎಸ್‌ಎಸ್‌ಎಲ್‌ಸಿಯ ಹಿರಿಯ ವಿದ್ಯಾರ್ಥಿಗಳಿಂದ ಇತ್ತೀಚೆಗೆ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರಿಗೆ ವಿದ್ಯಾರ್ಥಿಗಳು ಬಹುಮಾನ ನೀಡಿ ಗಮನ ಸೆಳೆದರು.

ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಕುಶಾಲನಗರ ಬಾಲಕಿಯರ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಬಿ.ಎನ್.ಪುಷ್ಪಾ ಪ್ರಥಮ ಸ್ಥಾನ, ಎನ್.ದೇವರಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಅಶೋಕ್ ಕುಮಾರ್ ದ್ವಿತೀಯ ಸ್ಥಾನ ಹಾಗೂ ಲೆಮನ್ ಸ್ಪೂನ್ ರೈಸ್ ಸ್ಪರ್ಧೆಯಲ್ಲಿ ಯಳಂದೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರವಿಕುಮಾರ್ ಪ್ರಥಮ ಸ್ಥಾನ, ಹೆಬ್ಬಾಲೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಭೋಜೇಗೌಡ ದ್ವಿತೀಯ ಸ್ಥಾನ ಪಡೆದುಕೊಂಡರು. ವಿಜೇತ ಶಿಕ್ಷಕರಿಗೆ ವಿದ್ಯಾರ್ಥಿಗಳು ಬಹುಮಾನ ವಿತರಿಸಿ, ಆಟೋಟಗಳಲ್ಲಿ ಶಿಕ್ಷಕರೊಂದಿಗೆ ಸಂಭ್ರಮಿಸಿದರು. ರತ್ನಪುರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸಿ.ಎಚ್ ಚಂದ್ರೇಗೌಡ, ನಿವೃತ್ತ ಶಿಕ್ಷಕ ಎ.ಎನ್ ಶಿವಣ್ಣ, ಮುತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಚ್.ಡಿ ವಾಸು, ಯಳಂದೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಲಕ್ಷ್ಮಣ ನಾಯಕ, ಸಂತೆಮರೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ತೈಜಾಕ್ಷಿ, ಜಿಜೆಸಿಪಿ ಪಿರಿಯಾಪಟ್ಟಣ ಶಾಲೆಯ ಸಿಬ್ಬಂದಿ ಕುಮಾರ್ ಸೇರಿದಂತೆ ಹಿರಿಯ ವಿದ್ಯಾರ್ಥಿಗಳು ಇದ್ದರು.