ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್‌ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಸೋಮವಾರ ಮುಂಜಾನೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅನಾಹುತ ಸಂಭವಿಸಿದ್ದು, ಅಲ್ಲಿ ವಾಸವಿದ್ದ ವಿದ್ಯಾರ್ಥಿಗಳು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.
ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯ ಮನೆಯೊಂದರಲ್ಲಿ ಬೆಳಗ್ಗೆ ಸುಮಾರು 7ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ಠಾಣೆ ಸಿಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿ ಮಾಡಿದ್ದಾರೆ. ಮನೆಯಲ್ಲಿದ್ದ ಸೋಾ, ಇಲೆಕ್ಟ್ರಾನಿಕ್ ಉಪಕರಣಗಳು ಸಹಿತ ವಿವಿಧ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಗೆ ವಾಸವಾಗಿದ್ದರು ಎಂದು ತಿಳಿದು ಬಂದಿದ್ದು, ಅದೃಷವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಹೀಟರ್ ಬಳಕೆ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಗ್ನಿ ಅವಘಡ ಸಂಭವಿಸಿದ ಮನೆ ಹಾಗೂ ಎರಡನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ ಕಾರಣ ಅಗ್ನಿ ಶಾಮಕದಳದ ಸಿಬಂದಿ ಆಕ್ಸಿಜನ್ ಮಾಸ್ಕ್ ಸಿಲಿಂಡರ್‌ಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಕಿಟಕಿಗಳನ್ನು ತೆರೆದು ್ಯಾನ್‌ಗಳನ್ನು ಬಳಸಿ ಹೊಗೆ ಹೊರಹೋಗುವಂತೆ ಮಾಡಲಾಯಿತು.