ಜಿಲ್ಲೆ

ವಿದ್ಯಾರ್ಥಿಗಳು ಪಠ್ಯ ಬೋಧನೆ ಕಡೆ ಗಮನ ಹರಿಸಿ

Mysuru - Desk - Naveen Kumar H P

ಮಡಿಕೇರಿ : ವಿದ್ಯಾರ್ಥಿಗಳು ಮೊಬೈಲ್ ಬಳಕೆಯಲ್ಲಿ ಹೆಚ್ಚು ಸಮಯ ಕಳೆಯದೆ ಪಠ್ಯ ಬೋಧನೆ ಕಡೆ ಗಮನ ಹರಿಸಿದರೆ ಪರೀಕ್ಷೆಯಲ್ಲಿ ಉತ್ತಮ ಸಾಧನೆಮಾಡಬಹುದು ಎಂದು ಸೋಮವಾರಪೇಟೆ ಸಂತ ಜೊಸೇಫರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಚೈತ್ರಾ ಅಭಿಪ್ರಾಯ ಪಟ್ಟರು.


ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ನೂತನ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು. ಕಲಿಕೆಗೆ ಹೆಚ್ಚು ಒತ್ತು ನೀಡುವ ಮೂಲಕ ಶೈಕ್ಷಣಿಕ ಸಾಧನೆ ಮಾಡುವಂತಾಗಬೇಕು ಎಂದು ಹೇಳಿದರು.


ಪ್ರಾಂಶುಪಾಲ ಇ.ಎಂ.ದಯಾನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿ ಬೇರೆಡೆ ವರ್ಗಾವಣೆಗೊಂಡಿರುವ ಉಪನ್ಯಾಸಕ ಚಂದ್ರಶೇಖರ್‌ಮೂರ್ತಿ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಉಪನ್ಯಾಸಕ ಮೋಹನ್, ಸುರೇಂದ್ರ, ಎಂ.ಎನ್. ಹರೀಶ್, ಎಚ್.ಎಂ.ವಿವೇಕ್ ಇತರರು ಇದ್ದರು.