ಜಿಲ್ಲೆ

ಪರಿಸರ ಬಗ್ಗೆ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಕಾಳಜಿ ಅಗತ್ಯ

ಇಂದಿರಾ ಎನ್ ಕೆ

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳ ವತಿಯಿಂದ ನಿಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರಣದಲ್ಲಿ ಅರಣ್ಯ ಇಲಾಖೆಯ ಕುಂದಾಪುರ ವಿಭಾಗ, ಮೂಡುಬಿದಿರೆ ಉಪವಿಭಾಗ ಹಾಗೂ ಕಾರ್ಕಳ ವಲಯದ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಗುರುವಾರ ಆಚರಿಸಲಾಯಿತು.

ಮುಖ್ಯ ಅತಿಥಿ ಕಾರ್ಕಳ ತಹಸೀಲ್ಡಾರ್ ಪ್ರದೀಪ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿ ತಮ್ಮ ಮನೆಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸಬೇಕು. ಪರಿಸರವನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದರು.

ನಿಟ್ಟೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆನಂದ್ ಎಸ್.ವಾರ್ತಿ, ಉಪವಲಯ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ, ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕಿ ಜೋಸ್ನಾ ಸ್ನೇಹಲತಾ, ಸ್ಕೌಟ್ಸ್ ಮತ್ತು ಗೈಡ್ ಶಿಕ್ಷಕ ಪ್ರಕಾಶ್ ನಾಯ್ಕ, ಕೃಷ್ಣ ಪ್ರಸಾದ್, ಆಶಾಜ್ಯೋತಿ, ಜಯಲಕ್ಷ್ಮೀ ಹಾಗೂ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ವಿದ್ಯಾರ್ಥಿಗಳು ಕ್ರಿಸ್ತ ಸೇವಕಿ ಆಶ್ರಮ ಪರ್ಪಲೆ ವೃದ್ಧಾಶ್ರಮಕ್ಕೆ ಭೇಟಿ ನೀಡಿದರು. ಧರ್ಮಗುರುಗಳಾದ ಬುಖಾರ್ಟ್ ಬರ್ಟಿ ಅಮನ್ನಾ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ನಂತರ ವಿದ್ಯಾರ್ಥಿಗಳು ವಿವಿಧ ರೀತಿಯ ಗಿಡಗಳನ್ನು ನೆಟ್ಟರು.