ಜಿಲ್ಲೆ

ಪ್ರತಿಭಟನೆ ಹಿಂಪಡೆದ ಮುರಾರ್ಜಿ ಶಾಲೆ ವಿದ್ಯಾರ್ಥಿಗಳು

ವಿನಯ ಹೆಗಡೆ

ಶಿರಸಿ: ತಾಲೂಕಿನ ಕಲ್ಲಿಯಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ವರ್ಗಾವಣೆ ಮಾಡಿರುವದನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಬುಧವಾರ ಕೈಬಿಡಲಾಯಿತು.

ಮಂಗಳವಾರ ಮುಂಜಾನೆಯಿಂದಲೆ ಊಟ ,ಉಪಹಾರ ತ್ಯಜಿಸಿ ವಿದ್ಯಾರ್ಥಿಗಳು ಹಳೆಯ ಪ್ರಾಂಶುಪಾಲರನ್ನು ವರ್ಗಾವಣೆ ಮಾಡಿರುವದನ್ನು ಖಂಡಿಸಿ ಪ್ರತಿಭಟನೆ ಆರಂಭಿಸಿದ ವಿದ್ಯಾರ್ಥಿಗಳು ಮಂಗಳವಾರ ರಾತ್ರಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದರು. ಬುಧವಾರ ಬೆಳಗ್ಗೆ ಮತ್ತೆ ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭ ಮಾಡಿದ್ದರು. ಸ್ಥಳಕ್ಕೆ ಆಗಮಿಸಿದ ಸಮಾಜಕಲ್ಯಾಣ ಇಲಾಖೆ ಡಿಡಿ ಅಜ್ಜಯ್ಯ ವಿದ್ಯಾರ್ಥಿಗಳ ಮನವೊಲಿಸುವಲ್ಲಿ ಯಶಸ್ವಿಯಾದರು.

ಮಾಧ್ಯಮ ಗಳೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಡಿ .ಡಿ ಅಜ್ಜಯ್ಯ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಯಲ್ಲಿರುವ ಹಿರಿಯ ಶಿಕ್ಷಕರನ್ನು ತಾತ್ಕಾಲಿಕವಾಗಿ ಪ್ರಾಂಶುಪಾಲರನ್ನಾಗಿ ಮಾಡಲಾಗುವುದು. ಇದೀಗ ತರಗತಿಗಳು ಆರಂಭವಾಗಿದೆ. ವಿದ್ಯಾರ್ಥಿಗಳ ಬೇಡಿಕೆಯನ್ನು ಪರಿಶೀಲನೆ ಮಾಡಲಾಗುವುದು ಎಂದರು.