ಜಿಲ್ಲೆ

ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಲಿ

ಲಲಾಟಾಕ್ಷ ಎಸ್

ಅರಸೀಕೆರೆ ಗ್ರಾಮಾಂತರ: ವಿದ್ಯಾರ್ಥಿಗಳು ಜ್ಞಾನಾರ್ಜನೆಯ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿ ಕೀರ್ತಿವಂತರಾಗಬೇಕೆಂದು ಪ್ರಾಂಶುಪಾಲ ಬಿ.ವಿ.ಕುಮಾರ್ ಸಲಹೆ ನೀಡಿದರು.


ಬಾಣವರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾರಂಗದಲ್ಲಿ ಉತ್ತಮ ಸಾಧನೆ ಮಾಡಿದರೆ ಕಾಲೇಜು, ತಾಲೂಕಿಗೆ ಕೀರ್ತಿ ಬರಲಿದೆ ಎಂದರು.


ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದೊರೇಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಸಂಸ್ಕಾರವಂತರಾಗಬೇಕು ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯಣ್ಣ, ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಹೀಧಾ ಬಾನು, ಮಂಜಪ್ಪ, ವೇದಾವತಿ, ಪಂಚಾಕ್ಷರಯ್ಯ, ಮಂಜಯ್ಯ, ಯೋಗ ಮೂರ್ತಿ ಇತರರಿದ್ದರು.