ಜಿಲ್ಲೆ

ಸಮಯಕ್ಕೆ ಸರಿಯಾಗಿ ಸಿಗದ KSRTC ಬಸ್; ಪ್ರತಿಭಟನೆಗೆ ಇಳಿದ ವಿದ್ಯಾರ್ಥಿಗಳು

Webdesk - Athul Damale

ತುಮಕೂರು: ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್​ಗಳ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮಕ್ಕಳೇ ಬಸ್​ ತಡೆದು ಪ್ರತಿಭಟನೆ ಮಾಡಿದ್ದಾರೆ.

ಈ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ನಡೆದಿದ್ದು ಅಲ್ಲಿ ವಿದ್ಯಾರ್ಥಿಗಳು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭ ಬಸ್ ತಡೆದು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿಗಳು ಶಾಲಾ ಕಾಲೇಜು ಸಮಯದಲ್ಲಿ ಹೆಚ್ಚು ಸರ್ಕಾರಿ ಬಸ್ ಗಳು ಬರುತ್ತಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ. ಈ ಸಂದರ್ಭ ಮಕ್ಕಳು, "ನಿಗದಿತ ಸಮಯಕ್ಕೆ ಬಸ್​ಗಳು ಬಾರದೇ ಇರುವ ಕಾರಣ ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಿ" ಎಂದು ಒತ್ತಾಯ ಮಾಡಿದ್ದಾರೆ.