ಧಾರವಾಡ: ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಅರ್ಹ ವಿದ್ಯಾರ್ಥಿಗಳಿಗೆ ವಸತಿ ನಿಲಯ ಪ್ರವೇಶಾತಿ ಸಿಗುತ್ತಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಅರ್ಹರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಿ ಹೆಚ್ಚುವರಿಯÁಗಿ ಪ್ರವೇಶ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಪರಿಷತ್ (ಎಸ್‌ಎ-ïಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಽಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ವಿದ್ಯಾಕಾಶಿ ಧಾರವಾಡಕ್ಕೆ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಓದಲು ಆಗಮಿಸುತ್ತಾರೆ. ಆದರೆ, ಬೇಡಿಕೆಗೆ ಅನುಗುಣವಾಗಿ ಸರ್ಕಾರಿ ವಸತಿ ನಿಲಯಗಳಿಲ್ಲ. ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗುತ್ತಿಲ್ಲ. ಇತ್ತೀಚೆಗೆ ನಡೆದ ಪ್ರವೇಶ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ. ಜಿಲ್ಲಾಽಕಾರಿಗಳು ಇತ್ತ ಗಮನ ಹರಿಸಿ ವಸತಿ ವಂಚಿತ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪ್ರವೇಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಗಂಟೆಗಟ್ಟಲೇ ಪ್ರತಿಭಟನೆ ನಡೆಸಿದರೂ ಅಽಕಾರಿಗಳು ಮನವಿ ಸ್ವೀಕರಿಸಲು ಆಗಮಿಸದಿರುವುದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.