ಜಿಲ್ಲೆ

ವಿದ್ಯಾರ್ಥಿಗಳು ಮಾದಕವಸ್ತುಗಳ ಬಗ್ಗೆ ಜಾಗೃತರಾಗಲಿ

ಇಂದಿರಾ ಎನ್ ಕೆ

ಕೋಟ: ಇಂದು ಇಡೀ ವ್ಯವಸ್ಥೆಯನ್ನು ಕಾಡುತ್ತಿರುವ ಮಾದಕ ವಸ್ತುಗಳಿಂದ ಮಕ್ಕಳ ಭವಿಷ್ಯಕ್ಕೆ ಸಂಚಕಾರ ತಂದೊಡ್ಡುತ್ತಿದೆ ಇದರ ಬಗ್ಗೆ ಜಾಗೃತರಾಗುವುದು ಅತ್ಯವಶ್ಯಕ ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಎಚ್ಚರಿಸಿದ್ದಾರೆ.

ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವ್ಯಸನಮುಕ್ತ ಸಮಾಜದ ಅರಿವು ಮೂಡಿಸುವ ದೃಷ್ಟಿಯಿಂದ ‘ವ್ಯಸನಮುಕ್ತ ಸಮಾಜ- ಸಂತಸದ ನಾಳೆಗಾಗಿ’ ಎನ್ನುವ ಶೀರ್ಷಿಕೆಯಡಿ ಗುಂಡ್ಮಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎರಡನೇ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಸುರೇಶ್ ಅಡಿಗ ಉದ್ಘಾಟಿಸಿದರು. ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಮನೋಹರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು. ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ಸತೀಶ್ ಐತಾಳ್ ಸ್ವಾಗತಿಸಿದರು.

ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ವಂದಿಸಿದರು. ಉಪಾಧ್ಯಕ್ಷ ದಿನೇಶ್ ಆಚಾರ್ ಸಹಕರಿಸಿದರು.