ಜಿಲ್ಲೆ

ವಿದ್ಯಾರ್ಥಿಗಳು ಸೇವಾಮನೋಭಾವ ಬೆಳೆಸಿಕೊಳ್ಳಬೇಕು: ಗೋಕುಲ್

ಆದರ್ಶ್. ಎಂ.ಕೆ.

ಮಡಿಕೇರಿ: ಎನ್‌ಎಸ್‌ಎಸ್ ಘಟಕದ ಸೇವಾ ಮನೋಭಾವನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕೆಂದು ಸೋಮವಾರಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಸಿವಿಲ್ ನ್ಯಾಯಾಧೀಶ ಗೋಕುಲ್ ಕಿವಿಮಾತು ಹೇಳಿದರು.


ಶ್ರೀಮತಿ ಡಿ.ಚೆನ್ನಮ್ಮ ಪ.ಪೂ. ಕಾಲೇಜಿನಲ್ಲಿ ಏನ್.ಎಸ್.ಎಸ್ ಘಟಕ ಉದ್ಘಾಟನೆ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯದ ಅರಿವು ಹಾಗೂ ಪೋಕ್ಸೋ ಕಾಯ್ದೆ, ಮೋಟಾರ್ ವಾಹನ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.


ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಮಂದಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿಯೇ ಕಾನೂನಿನ ಬಗ್ಗೆ ಅರಿವನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಿ ಎಂದು ಸಲಹೆ ನೀಡಿದರು.


ಹಿರಿಯ ಉಪನ್ಯಾಸಕ ರಾಜಸುಂದರಂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಶಿಕ್ಷಕಿ ರೇವತಿ, ಉಪನ್ಯಾಸಕಿ ಪ್ರಮೀಳ, ಸೀಮಾ ಮಂದಪ್ಪ, ಸಂಸ್ಥೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.